ಮೈಸೂರು

ಅ.20 : ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಮೈಸೂರು,ಅ.18:- ಮೈಸೂರು ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ವಿಭಾಗದ  ವತಿಯಿಂದ  ಪುರಭವನದಲ್ಲಿ ಅ.20ರಂದು ಸಂಜೆ 4.30ಕ್ಕೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಮೈಸೂರು ಪತ್ರಕರ್ತರ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಪರಿಶಿಷ್ಟ ಪಂಗಡ ವಿಭಾಗದ ಮೈಸೂರು ನಗರ ಅಧ್ಯಕ್ಷ ರೋಹಿತ್ ಎಸ್ ಮಾತನಾಡಿ ಕಾರ್ಯಕ್ರಮದ ಉದ್ಘಾಟನೆಯನ್ನು ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ನೆರವೇರಿಸಲಿದ್ದು, ಶ್ರೀಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಮಹರ್ಷಿ ವಾಲ್ಮೀಕಿ ನಿಗಮಮಂಡಳಿಯ ಮಾಜಿ ಅಧ್ಯಕ್ಷ ಹೆಚ್.ಸಿ.ಬಸವರಾಜು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್, ಮಾಜಿ ಸಚಿವ ಡಾ,ಹೆಚ್.ಸಿ.ಮಹದೇವಪ್ಪ, ಶಾಸಕ ತನ್ವೀರ್ ಸೇಠ್,ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯ ಧರ್ಮಸೇನಾ, ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ವಾಸು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ 2021ರ ಎಸ್ ಎಸ್ ಎಲ್ ಸಿ  ಮತ್ತು ಪಿಯುಸಿಯಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲಾಗುವುದು. ಐದು ಮಂದಿ ಕೊರೋನಾ ವಾರಿಯರ್ಸ್ ಗಳನ್ನು ಸನ್ಮಾನಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಪ್ರಧಾನಕಾರ್ಯದರ್ಶಿ ಯೋಗೇಶ್ ನಾಯಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: