ಮೈಸೂರು

ಅ.21 ರಂದು ಪ್ರೊ. ನಾಡಿಗ ಕೃಷ್ಣಮೂರ್ತಿ ಜನ್ಮ ಶತಮಾನೋತ್ಸವ ಸಮಾರಂಭ

ಮೈಸೂರು,ಅ.18:- ಮೈಸೂರು ವಿಶ್ವವಿದ್ಯಾನಿಲಯ, ಕರ್ನಾಟಕ ಮಾಧ್ಯಮ ಅಕಾಡೆಮಿ, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 21ರಂದು ಗುರುವಾರ ಭಾರತದಲ್ಲಿ ಪತ್ರಿಕಾ ಶಿಕ್ಷಣದ ಆದ್ಯ ಪ್ರವರ್ತಕರಾದ ಪ್ರೊ. ನಾಡಿಗ ಕೃಷ್ಣಮೂರ್ತಿ ಅವರ ಜನ್ಮಶತಮಾನೋತ್ಸವ ಸಮಾರಂಭವನ್ನು ಆಯೋಜಿಸಲಾಗಿದೆ.

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿರುವ ವಿಜ್ಞಾನಭವನದ ಸೆಮಿನಾರ್ ಹಾಲ್‌ ನಲ್ಲಿ ಅಂದು ಬೆಳಗ್ಗೆ 10.30 ಕ್ಕೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಲಿದೆ.

ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್‌ ಕುಮಾರ್‌ ಸಮಾರಂಭವನ್ನು ಉದ್ಘಾಟಿಸುವರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ.ರವಿಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಕೆ.ಸದಾಶಿವ ಶೆಣೈ ಅಧ್ಯಕ್ಷತೆ ವಹಿಸುವರು.

ಸಮಾರಂಭದಲ್ಲಿ ಅಸ್ಸಾಂನ ಸಿಲ್ ಚಾರ್‌ ನಲ್ಲಿರುವ ಕೇಂದ್ರೀಯ ವಿಶ್ವವಿದ್ಯಾಲಯದ ವಿಶ್ರಾಂತ ಸಹಕುಲಪತಿ ಪ್ರೊ.ಕೆ.ವಿ.ನಾಗರಾಜ್ ಅವರು ಪ್ರೊ.ನಾಡಿಗರ ನೆನಪು ಹಾಗೂ ಮಾಧ್ಯಮ ಶಿಕ್ಷಣದ ಮುಂದಿನ ಮಾರ್ಗ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡುವರು ಎಂದು ಮೈಸೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರೊ ನಿರಂಜನ ವಾನಳ್ಳಿ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Leave a Reply

comments

Related Articles

error: