ಮೈಸೂರು

ಈದ್ ಮಿಲಾದ್ : ಸರಳ ಆಚರಣೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು, ಅ.18:- ನಾಳೆ ಮುಸ್ಲೀಂ ಬಾಂಧವರ ಈದ್ ಮಿಲಾದ್ ಹಬ್ಬ ಆಚರಣೆ ಹಿನ್ನೆಲೆ ಮೈಸೂರು ಜಿಲ್ಲಾಡಳಿತ ಮಾರ್ಗಸೂಚಿಯನ್ನ ಬಿಡುಗಡೆ ಮಾಡಿದ್ದು, ಸರಳವಾಗಿ ಹಬ್ಬ ಆಚರಣೆಗೆ ಸೂಚನೆ ನೀಡಿದೆ.

ಈ ಕುರಿತು ಆದೇಶ ಹೊರಡಿಸಿರುವ ಮೈಸೂರು ಜಿಲ್ಲಾಧಿಕಾರಿ  ಡಾ. ಬಗಾದಿ ಗೌತಮ್ ಕೋವಿಡ್ ಹಿನ್ನೆಲೆ ಸರಳವಾಗಿ ಈದ್ ಮಿಲಾದ್ ಆಚರಣೆಗೆ ಸೂಚನೆ ನೀಡಿದ್ದಾರೆ. ಸಾಮೂಹಿಕ ಪ್ರಾರ್ಥನೆ, ಮೆರವಣಿಗೆಗೆ ನಿಷೇಧ ಹೇರಲಾಗಿದ್ದು, ಪರಸ್ಪರ ಹಸ್ತಲಾಘವ ಮತ್ತು ಆಲಿಂಗನಕ್ಕೆ ಅವಕಾಶ ಇಲ್ಲ. ಪ್ರವಚನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಗರಿಷ್ಠ 100 ಮಂದಿ ಸೇರಲು ಮಾತ್ರ ಅವಕಾಶ ನೀಡಲಾಗಿದೆ.

ಮಸೀದಿ, ದರ್ಗಾಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರಾರ್ಥನೆ ಸಲ್ಲಿಸಲು ಸೂಚಿಸಲಾಗಿದ್ದು, 60 ಕ್ಕಿಂತ ಮೇಲ್ಪಟ್ಟ ಮತ್ತು 10 ವರ್ಷಕ್ಕಿಂತ ಕೆಳಗಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಸಲ್ಲಿಸಲು  ಡಾ. ಬಗಾದಿ ಗೌತಮ್ ಸಲಹೆ ನೀಡಿದ್ದಾರೆ. ಹಾಗೆಯೇ ಪ್ರಾರ್ಥನೆ ವೇಳೆ ಸಾಮಾಜಿಕ ಅಂತರ ಮತ್ತು ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: