ದೇಶಪ್ರಮುಖ ಸುದ್ದಿ

ಹವಾಮಾನ ಬದಲಾವಣೆ :  ಬ್ರಿಟನ್‌ ನ ಗ್ಲಾಸ್ಗೋ COP-26 ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗವಹಿಸುವ ಸಾಧ್ಯತೆ 

ದೇಶ(ನವದೆಹಲಿ)ಅ.19:- ಹವಾಮಾನ ಬದಲಾವಣೆಯ ಕುರಿತು ಬ್ರಿಟನ್ ನ ಗ್ಲಾಸ್ಗೋದಲ್ಲಿ ನಡೆಯಲಿರುವ ಸಂಯುಕ್ತ ರಾಷ್ಟ್ರಗಳ ಮಹಾಸಭೆಯ COP-26 ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಮ್ಮೇಳನವು ಅಕ್ಟೋಬರ್ 31 ರಿಂದ ನವೆಂಬರ್ 11 ರವರೆಗೆ ನಡೆಯಲಿದೆ. ಕಾರ್ಯಕ್ರಮದ ಅಧಿಕೃತ ಘೋಷಣೆಯನ್ನು ಇನ್ನೂ ಮಾಡಲಾಗಿಲ್ಲ.

ಪ್ರಧಾನಿ ಮೋದಿಯವರಲ್ಲದೆ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅವರು ಬ್ರಿಟನ್ ನ  ಗ್ಲಾಸ್ಗೊದಲ್ಲಿ ಸಂಯುಕ್ತ ರಾಷ್ಟ್ರಗಳ ಮಹಾಸಭೆಯ   COP-26 ಸಮಾವೇಶದಲ್ಲಿ   ಭಾರತವನ್ನು ಪ್ರತಿನಿಧಿಸುತ್ತಾರೆ. ಸಮ್ಮೇಳನವು ಅಕ್ಟೋಬರ್ 31 ರಿಂದ ನವೆಂಬರ್ 11 ರವರೆಗೆ ನಡೆಯಲಿದೆ. ಹವಾಮಾನ ಬದಲಾವಣೆಯ ಸವಾಲುಗಳನ್ನು ಎದುರಿಸಲು ನಿರಂತರ ಪ್ರಕ್ರಿಯೆಯ ಮೂಲಕ ಕೆಲಸ ಮಾಡುತ್ತಿರುವ ವಿಶ್ವದ ಕೆಲವೇ ದೇಶಗಳಲ್ಲಿ ಭಾರತವೂ ಒಂದು ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ಇದಷ್ಟೇ ಅಲ್ಲ, ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತವು ಮಾಡುತ್ತಿರುವ ಪ್ರಯತ್ನಗಳನ್ನು ಇತ್ತೀಚೆಗೆ ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಮೆಚ್ಚಿದ್ದಾರೆ. ಪಿಎಂ ಮೋದಿಯವರೊಂದಿಗಿನ ದೂರವಾಣಿ ಸಂಭಾಷಣೆಯ ಸಮಯದಲ್ಲಿ, ಅವರು ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತವನ್ನು ವಿಶ್ವ ನಾಯಕ ಎಂದು ಬಣ್ಣಿಸಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: