ದೇಶಪ್ರಮುಖ ಸುದ್ದಿ

ಈದ್ -ಮಿಲಾದ್‌ ಪ್ರಯುಕ್ತ ಶುಭ ಕೋರಿದ ರಾಷ್ಟ್ರಪತಿ-ಪ್ರಧಾನಿ

ದೇಶ(ನವದೆಹಲಿ)ಅ.19:- ದೇಶಾದ್ಯಂತ ಮುಸ್ಲಿಮರು ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜನ್ಮದಿನವಾದ ಈದ್ -ಮಿಲಾದ್‌ ನ್ನು   ಸಂಭ್ರಮದಿಂದ ಇಂದು ಆಚರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮ್‌ ನಾಥ್ ಕೋವಿಂದ್ ಸೇರಿದಂತೆ ಗಣ್ಯರು ಶುಭಾಶಯ ಕೋರಿದ್ದಾರೆ.

ಟ್ವೀಟರ್ ನಲ್ಲಿ ಟ್ವೀಟ್ ಮಾಡಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು, “ದೇಶದ ಜನತೆಗೆ ಈದ್ ಮಿಲಾದ್ ಶುಭಾಶಯಗಳು. ಪ್ರಮುಖವಾಗಿ ಮುಸ್ಲಿಂ ಸಹೋದರ ಹಾಗೂ ಸಹೋದರಿಯರಿಗೆ ಈದ್ ಮಿಲಾದ್ ಶುಭಾಶಯಗಳು. ಪ್ರವಾದಿ ಮುಹಮ್ಮದ್ ಅವರ ಜನ್ಮದಿನವನ್ನು ಈದ್-ಇ-ಮಿಲಾದ್ ಎಂದು ಆಚರಿಸಲಾಗುತ್ತದೆ. ನಾವು ಪ್ರವಾದಿಯ ಜೀವನ ಮತ್ತು ಆದರ್ಶಗಳಿಂದ ಸ್ಫೂರ್ತಿ ಪಡೆಯೋಣ, ಸಮಾಜದ ಏಳಿಗೆ ಮತ್ತು ದೇಶದಲ್ಲಿ ಶಾಂತಿ ಮತ್ತು ಸೌಹಾರ್ದತೆಗಾಗಿ ದುಡಿಯೋಣ” ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡುವ ಮೂಲಕ ಶುಭಾಶಯ ಕೋರಿದ್ದು, “ದೇಶದ ಜನತೆಗೆ ಈದ್ ಮಿಲಾದ್ ಶುಭಾಶಯಗಳು,  ನಮ್ಮ ಸುತ್ತಲೂ ಶಾಂತಿ ಮತ್ತು ಸಮೃದ್ಧಿ ಇರಲಿ. ದಯೆ ಮತ್ತು ಸಹೋದರತ್ವದ ಗುಣಗಳು ಯಾವಾಗಲೂ ಮೇಲುಗೈ ಸಾಧಿಸಲಿ. ಈದ್ ಮುಬಾರಕ್! “ಎಂದಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: