ಮೈಸೂರು

ಪ್ರೊ.ಎಸ್.ನಿರಂಜನ್ ಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ

ಮೈಸೂರು,ಅ.20:- ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ಎಸ್.ನಿರಂಜನ್ ಅವರಿಗೆ ಪ್ರಸಕ್ತ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಲಭಿಸಿದೆ.

ಇಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿರುವ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರೊ.ನಿರಂಜನ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡುವರು. ಮೈಸೂರು ವಿಶ್ವವಿದ್ಯಾಲಯದಲ್ಲಿ ಸಸ್ಯಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡಿದ್ದ ಅವರು ಇಲ್ಲಿಯೇ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು.

ಮೂಲತಃ ಚಿತ್ರದುರ್ಗ ಜಿಲ್ಲೆಯವರಾದ ಇವರು ಸರ್ಕಾರಿ ಕಾಲೇಜಿನಲ್ಲಿ ಬಿಎಸ್ಸಿ ಪದವಿ ಪೂರೈಸಿದ ನಂತರ ಮೈಸೂರು ವಿವಿ ಸಸ್ಯಶಾಸ್ತ್ರದಲ್ಲಿ ಬೀಜ ತಂತ್ರಜ್ಞಾನ ವಿಷಯದಲ್ಲಿ ಎಂಫಿಲ್ ಮಾಡಿದ್ದಾರೆ.

ರಾಜ್ಯಮಟ್ಟದ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆಯಾಗಿರುವ ಮೈಸೂರಿನ ಪ್ರೊ.ಎಸ್.ಆರ್.ನಿರಂಜನ್ ಅವರನ್ನು ಸಮಗ್ರ ನಿನ್ನೆ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಭ ಅರಸ್ ಗೌರವಿಸಿದರು.

ಬೆಂಗಳೂರಿನಲ್ಲಿ ಇಂದು ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲು ಆಹ್ವಾನಿಸಿದರು. ಈ ಸಂದರ್ಭ ಗಿರಿಜನ ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ವ್ಯವಸ್ಥಾಪಕ ಹನುಮಂತರಾಯಪ್ಪ, ಹುಣಸೂರು ತಾಲೂಕು ಗಿರಿಜನ ಕಲ್ಯಾಣಾಧಿಕಾರಿ ಬಸವರಾಜು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: