ದೇಶಪ್ರಮುಖ ಸುದ್ದಿ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ   16 ಸಾವಿರಕ್ಕೂ ಹೆಚ್ಚು ಹೊಸ ಕೊರೋನಾ ಪ್ರಕರಣ ಪತ್ತೆ

ದೇಶ(ನವದೆಹಲಿ)ಅ.23:- ಭಾರತದಲ್ಲಿ ಮತ್ತೊಮ್ಮೆ ಕೊರೋನ ವೈರಸ್ ಪ್ರಕರಣಗಳಲ್ಲಿ ಏರಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 16 ಸಾವಿರದ 326 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

ಇದು ಒಂದು ದಿನಕ್ಕೆ ಮುಂಚಿತವಾಗಿ ಬಂದ ಒಟ್ಟು ಪ್ರಕರಣಗಳಿಗಿಂತ ಶೇಕಡಾ 3.42 ರಷ್ಟು ಹೆಚ್ಚಿದೆ. ಇದಲ್ಲದೆ  666 ಮಂದಿ ಸಾವನ್ನಪ್ಪಿದ್ದಾರೆ. ಆದರೆ ಸದ್ಯಕ್ಕೆ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಎರಡು ಲಕ್ಷಕ್ಕಿಂತ ಕಡಿಮೆ ಇರುವುದು ಸಮಾಧಾನದ ಸಂಗತಿಯಾಗಿದೆ.

ಇತ್ತೀಚಿನ ಅಂಕಿ ಅಂಶಗಳ ಪ್ರಕಾರ  ಪ್ರಸ್ತುತ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷ 73 ಸಾವಿರ 728 . ಪ್ರಸ್ತುತ ಕೇರಳದಲ್ಲಿ ಅತಿ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಇಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 80 ಸಾವಿರಕ್ಕಿಂತ ಹೆಚ್ಚು. ಮತ್ತೊಂದೆಡೆ, ಎರಡನೇ ಸಂಖ್ಯೆ ಮಹಾರಾಷ್ಟ್ರದಿಂದ ಬಂದಿದ್ದು, ಅಲ್ಲಿ 24 ಸಾವಿರಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಈ ಎರಡು ರಾಜ್ಯಗಳಿಗೆ ಹೋಲಿಸಿದರೆ, ಉತ್ತರ ಪ್ರದೇಶದಲ್ಲಿ ಕೇವಲ 107 ಸಕ್ರಿಯ ಪ್ರಕರಣಗಳಿವೆ. ಆದರೆ ದೆಹಲಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 340 ಇದೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: