ಕರ್ನಾಟಕಪ್ರಮುಖ ಸುದ್ದಿ

ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಹಿನ್ನೆಲೆ : ಮಾಲಾರ್ಪಣೆ ಮಾಡಿ ಗೌರವ ಸಮರ್ಪಿಸಿದ ಮುಖ್ಯಮಂತ್ರಿ ಎಸ್. ಬಸವರಾಜ್ ಬೊಮ್ಮಾಯಿ  

ರಾಜ್ಯ (ಹುಬ್ಬಳ್ಳಿ) ಅ,23 :- ಉಪ ಚುನಾವಣೆ  ಪ್ರಚಾರದ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲಿ  ವಾಸ್ತವ್ಯ ಹೂಡಿರುವ ಮುಖ್ಯಮಂತ್ರಿ  ಎಸ್. ಬಸವರಾಜ ಬೊಮ್ಮಾಯಿ  ಅವರು ಇಂದು ವೀರ ರಾಣಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿರುವ ರಾಣಿ ಚನ್ನಮ್ಮನ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಮರ್ಪಿಸಿದರು.

ಬಳಿಕ ವಿಶ್ವ ಕನ್ನಡ ಬಳಗ ಸಂಘಟನೆ ಆಯೋಜಿಸಿದ್ದ ರಾಣಿ ಚನ್ನಮ್ಮ ಜಯಂತಿಯನ್ನು ಉದ್ಘಾಟಿಸಿ  ಮಾತನಾಡಿದ ಅವರು ರಾಣಿ ಚನ್ನಮ್ಮನನ್ನು ಕೊಂಡಾಡಿದರು.  ನಾನು ಸಚಿವನಾಗಿದ್ದಾಗ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ರಚಿಸಿದ್ದೆ.  ಈ ವರ್ಷ 50 ಕೋಟಿಯ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ. ಪ್ರಾಧಿಕಾರಕ್ಕೆ 50 ಕೋಟಿ ಅನುದಾನ ನೀಡಲಾಗುವುದು ಎಂದು ತಿಳಿಸಿದರು.

ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ, ಕೈಮಗ್ಗ, ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಸುರಪುರ ಶಾಸಕ ರಾಜೂಗೌಡ (ನರಸಿಂಹ ನಾಯಕ) ಮಹಾನಗರಪಾಲಿಕೆ ಸದಸ್ಯ ರಾಜಣ್ಣ ಕೊರವಿ ಮತ್ತಿತರರು ಉಪಸ್ಥಿತರಿದ್ದರು. (ಎಸ್.ಎಂ,ಎಸ್.ಎಚ್)

Leave a Reply

comments

Related Articles

error: