ಪ್ರಮುಖ ಸುದ್ದಿಮೈಸೂರು

ನಾಳೆ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಮತ್ತೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ : ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಮೈಸೂರು,ಅ.23:- ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ನಾಳೆ ಮೈಸೂರು ಪ್ರವಾಸವನ್ನು ಕೈಗೊಂಡಿದ್ದಾರೆ. ಅದರಲ್ಲೂ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ ನೀಡಲಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಇತ್ತೀಚೆಗಷ್ಟೇ ಮೈಸೂರಿಗೆ ಬಂದಿದ್ದ ಅವರು ಇದೀಗ ಮತ್ತೊಮ್ಮೆ ಮೈಸೂರು ಪ್ರವಾಸವನ್ನು ಕೈಗೊಂಡಿದ್ದಾರೆ. ಎರಡನೇ ಬಾರಿಗೆ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿಯನ್ನು ನೀಡಲಿದ್ದಾರೆ.  ಎರಡನೇ ಬಾರಿ ಪ್ರವಾಸ ಕೈಗೊಂಡಿರುವ ಅವರು ಚಾಮುಂಡೇಶ್ವರಿ ಕ್ಷೇತ್ರದ ರಮ್ಮನಹಳ್ಳಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿ ಸ್ಥಳೀಯ ಮಸಾಲಾ ಅಭಿವೃದ್ಧಿಗೆ ಆರ್ಥಿಕ ನೆರವು ನೀಡಲು ಬರಲಿದ್ದಾರೆ ಎನ್ನಲಾಗಿದೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಸಂಘಟನೆ ಮಾಡುವ ಜವಾಬ್ದಾರಿ ಹೆಚ್.ಡಿ.ಕುಮಾರಸ್ವಾಮಿಯವರ ಹೆಗಲೇರಿದೆ ಎನ್ನಲಾಗುತ್ತಿದೆ. ಇದರಿಂದ ಎರಡನೇ ಬಾರಿಗೆ ಮೈಸೂರು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ ನೀಡುತ್ತಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ನಡೆ ತೀವ್ರ ಕುತೂಹಲ ಮೂಡಿಸಿದೆ. ಆದರೆ ಕ್ಷೇತ್ರದ ಶಾಸಕರಾಗಿರುವ ಜಿ.ಟಿ.ದೇವೇಗೌಡ ಅವರಾಗಲೀ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರಾಗಲಿ ತಮ್ಮ ನಡೆಯ ಗುಟ್ಟನ್ನು ರಹಸ್ಯವಾಗಿಯೇ ಇರಿಸಿದ್ದಾರೆ. ಇಲ್ಲಿಯವರೆಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶಾಸಕ ಜಿ.ಟಿ.ದೇವೇಗೌಡ ಅವರ ಕುರಿತು ತುಟಿ ಬಿಚ್ಚಿರಲಿಲ್ಲ. ನಾಳೆಯಾದರೂ ಶಾಸಕ ಜಿ.ಟಿ.ದೇವೇಗೌಡರ ಕುರಿತು ಮಾತನಾಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

Leave a Reply

comments

Related Articles

error: