ಕರ್ನಾಟಕಪ್ರಮುಖ ಸುದ್ದಿ

ಉಪಚುನಾವಣೆ ಯಲ್ಲಿ ಕಾಂಗ್ರೆಸ್ ಪರ ಅಲೆ : ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಸಿದ್ದರಾಮಯ್ಯ

ರಾಜ್ಯ(ಶಿವಮೊಗ್ಗ) ಅ,23 :-ಸಿಂಧಗಿ ಮತ್ತು ಹಾನಗಲ್ ನಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪರ ಅಲೆ ಇದ್ದು ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ನಮ್ಮ ನಿರೀಕ್ಷೆಗೂ ಮೀರಿ ಜನರು ಸ್ಪಂದಿಸುತ್ತಿದ್ದಾರೆ. ಜನರ ಉತ್ಸಾಹ ನೋಡಿದಾಗ ಕಾಂಗ್ರೆಸ್ ಪರ ವಾತಾವರಣವಿದೆ ಎಂದು ಸ್ಪಷ್ಟವಾಗಿ ತಿಳಿಯುತ್ತದೆ. ನಮ್ಮ ಸರ್ಕಾರದ ಅವಧಿಯಲ್ಲಿ ಮಾಡಿದ ಜನಪರ ಕೆಲಸಗಳನ್ನು ಜನರು ನೆನಸಿಕೊಳ್ಳುತ್ತಿದ್ದಾರೆ. ಮತ್ತೆ ರಾಜ್ಯದಲ್ಲಿ ಕಳೆದ ಎರಡುಕಾಲು ವರ್ಷದಲ್ಲಿ ಬಿಜೆಪಿ ಆಡಳಿತ ನಡೆಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮಾಡಿದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಹಾಗಾಗಿ ಎಲ್ಲೆಡೆ ಈ ಬಾರಿ ಕಾಂಗ್ರೆಸ್ ಪರ ಅಲೆಯಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಧು ಬಂಗಾರಪ್ಪ ,ಕಾಂಗ್ರೆಸ್ ಮುಖಂಡರು ಅವರ ಜೊತೆಗಿದ್ದರು. (ಎಸ್.ಎಂ)

Leave a Reply

comments

Related Articles

error: