ಮೈಸೂರು

ಸಮ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಯುವಕರ ಪಾತ್ರ ಪ್ರಮುಖ : ಕೆ.ಸುರೇಶ್

ಮೈಸೂರು,ಅ.24:- ಯುವಕರು ಈ ದೇಶದ ಆಸ್ತಿಗಳು ಸಮ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಯುವಕರು ಪ್ರಮುಖ ಪಾತ್ರ ವಹಿಸುತ್ತಾರೆ. ಸಂಘಟನೆ ಮೂಲಕ ಒಗ್ಗೂಡಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕ ಕೆ. ಸುರೇಶ್ ಹೇಳಿದರು.
ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜನೆ ಮಾಡಲಾಗಿದ್ದ ವೃತ್ತಿ ಕೌಶಲ್ಯ ಮಾಹಿತಿ ಕಾರ್ಯಗಾರವನ್ನು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಯುವಕರನ್ನು ಗುರಿಯಾಗಿಸಿಕೊಂಡು ಬದುಕಿನ ವ್ಯವಸ್ಥೆಗೆ ಸವಾಲುಗಳನ್ನು ಎದುರಿಸಲು ಯುವ ಮಿತ್ರರಿಗೆ ಮಾರ್ಗ ದರ್ಶನ ಮುಖ್ಯವಾಗುತ್ತದೆ. ವಾರ್ಷಿಕ ಯೋಜನೆಯಲ್ಲಿ ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳು ಕೆಲಸ ಮಾಡುತ್ತಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ ಇದನ್ನು ಯುವಕ ಯುವತಿಯರು ಸದುಪಯೋಗ ಪಡಿಸಿಕೊಳ್ಳಿ ಎಂದು ಹೇಳಿದರು.
ಕ್ರೀಡೆ, ಕಲೆ, ಜಾನಪದ ಕೌಶಲ್ಯ ಅಭಿವೃದ್ಧಿ ಮಾಡಬೇಕು, ಯುವ ಸಮುದಾಯವನ್ನು ಮುಖ್ಯ ವಾಹಿನಿಗೆ ತರಬೇಕು, ಆ ನಿಟ್ಟಿನಲ್ಲಿ ನಿರುದ್ಯೋಗ ಯುವಕ ಯುವತಿಯರಿಗೆ ಮಾಹಿತಿ ಮಾರ್ಗದರ್ಶನ ನೀಡುವ ಉದ್ದೇಶವಾಗಿದೆ. ಗ್ರಾಮೀಣ ಪ್ರದೇಶದ ಯುವ ಪೀಳಿಗೆಗೆ ಸಂಘಟನೆಯಿಂದ ಒಗ್ಗೂಡಿಸಿ ಎಂದು ಕರೆ ನೀಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡಿ. ಸಾಧ್ಯವಾದಷ್ಟು ಹಳ್ಳಿಯಲ್ಲಿ ಬಯಲು ಬಹಿರ್ದೆಸೆಗೆ ಅವಕಾಶ ಮಾಡಿಕೊಡಬೇಡಿ ಜಾಗೃತಿ ಮೂಡಿಸಿ ಎಂದು ಮನವಿ ಮಾಡಿದರು. ಯುವಕ ಯುವತಿಯರಿಗೆ ವೃತ್ತಿ ಕೌಶಲ್ಯ ಮಾಹಿತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಜೆಎಸ್ಎಸ್ ಜನ ಶಿಕ್ಷಣ ಸಂಸ್ಥೆಯ ಸುಮ ಮತ್ತಿತರರು ಉಪನ್ಯಾಸ ನೀಡಿದರು.
ಕಾರ್ಯಾಗಾರದಲ್ಲಿ 50 ಕ್ಕೂ ಹೆಚ್ಚು ಯುವಕ ಯುವತಿಯರು ಭಾಗವಹಿಸಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: