ಕರ್ನಾಟಕಪ್ರಮುಖ ಸುದ್ದಿ

ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ : ಟ್ವೀಟ್ ಮೂಲಕ ಬಿಜೆಪಿ ಕಿಡಿ

ರಾಜ್ಯ(ಬೆಂಗಳೂರು)ಅ.25:- ಭಾರತೀಯ ಜನತಾಪಕ್ಷ ಮಾಜಿ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಕಿಡಿಕಾರಿದ್ದು, ಸಮಾಜವನ್ನು ಜಾತಿ ಆಧಾರದ ಮೇಲೆ ಒಡೆದು ರಾಜಕೀಯ ಲಾಭ ಪಡೆಯುವುದರಲ್ಲಿ ಸಿದ್ದರಾಮಯ್ಯ ಅವರಿಗಿಂತ ನಿಷ್ಣಾತರು ಬೇರೆ ಇಲ್ಲ. ಸಿದ್ದರಾಮಯ್ಯ  ಜಾತಿ ವಿಭಜಕ ಅಂತ ಟೀಕೆ ಮಾಡಿದೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಬಿಜೆಪಿ  ವಿದ್ಯಾರ್ಥಿಗಳ ಪ್ರವಾಸ ಕಾರ್ಯಕ್ರಮದಲ್ಲೂ ಜಾತಿ ಹುಡುಕಿದವರು ನೀವಲ್ಲವೇ ಸಿದ್ದರಾಮಯ್ಯ? ಅಂತ ಪ್ರಶ್ನೆ ಮಾಡಿದ್ದು, ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ, ಅದೇ ಸಿದ್ದರಾಮಯ್ಯ ಇಂದು ಮತಗಳಿಸಲು ಸುಳ್ಳಿನ ಸರಮಾಲೆ ಸೃಷ್ಟಿಸುತ್ತಿದ್ದಾರೆ. ವೀರಶೈವ, ಲಿಂಗಾಯತ ಎಂದು ವಿಭಜನೆಯ ಬೆಂಕಿ ಹಚ್ಚಿದ ಸಿದ್ದರಾಮಯ್ಯ, ಯಾವ ಆಧಾರದಲ್ಲಿ ಜಾತಿ ಸಮುದಾಯಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಹೇಳುತ್ತೀರಿ ಸಿದ್ದರಾಮಯ್ಯ? ಜಾತಿ ಎಂಬುದು ಈ ದೇಶದಲ್ಲಿ ವಾಸ್ತವ ಎನ್ನುವ ಸಿದ್ದರಾಮಯ್ಯ ಅವರು. ಜಾತಿ ರಾಜಕೀಯ ಬಿಟ್ಟು ಬೇರೇನು ಮಾಡಿಲ್ಲ ಎಂದು ಗುಡುಗಿದೆ.

ಸದ್ಯ ರಾಜ್ಯದಲ್ಲಿ ಬೈಎಲೆಕ್ಷನ್​ ಬಿಸಿ ಜೋರಾಗಿದ್ದು, ಸಿದ್ದರಾಮಯ್ಯ ಇಂತಹ ಸಮಯದಲ್ಲಿ ಜಾತಿವಾರು ಸಭೆ ನಡೆಸಿದ್ದು ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ, ನಿಜವಾಗಿಯೂ ಸಿದ್ದರಾಮಯ್ಯ ಜಾತ್ಯಾತೀತರಾಗಿದ್ದರೆ ಉಪಚುನಾವಣೆ ಸಂದರ್ಭದಲ್ಲೂ ಜಾತಿವಾರು ಸಭೆ ನಡೆಸುವ ಅಗತ್ಯವಿತ್ತೇ? ಸಿದ್ದರಾಮಯ್ಯನವರೇ, ನಿಮ್ಮಿಂದ ಜಾತಿಯನ್ನು ಉಪಜಾತಿಯಾಗಿ ಒಡೆಯುವುದಕ್ಕೆ ಮಾತ್ರ ಸಾಧ್ಯ. ಎಂದು   ಜಾತಿ ವಿಭಜಕ ಸಿದ್ದರಾಮಯ್ಯ ಅಂತ ಹ್ಯಾಶ್ ಟ್ಯಾಗ್ ಬಳಕೆ ಮಾಡುವುದರ ಮೂಲಕ ಪ್ರಶ್ನಿಸಿದೆ.

Leave a Reply

comments

Related Articles

error: