ಕರ್ನಾಟಕಪ್ರಮುಖ ಸುದ್ದಿ

ಕೊಡಗು ಜಿಲ್ಲೆಯಲ್ಲಿ ಸೋಮವಾರ 03 ಹೊಸ ಕೋವಿಡ್-19 ಪ್ರಕರಣ

ರಾಜ್ಯ(ಮಡಿಕೇರಿ )ಅ.26:-ಜಿಲ್ಲೆಯಲ್ಲಿ ಸೋಮವಾರ 03 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 03 ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 01 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ 01 ಪ್ರಕರಣ ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 02 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ 02 ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 35,209 ಆಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 08 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 34,703 ಮಂದಿ ಗುಣಮುಖರಾಗಿದ್ದಾರೆ. 77 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ, ಇದುವರೆಗೆ ಒಟ್ಟು 429 ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 12 ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.0.62 ಆಗಿದೆ ಎಂದು ಜಿಲ್ಲಾಧಿಕಾರಿ ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: