ಕರ್ನಾಟಕಪ್ರಮುಖ ಸುದ್ದಿ

ಜಿಲ್ಲೆಯ ಪ್ರವಾಹಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಎಸ್ ಅಶ್ವತಿ ಭೇಟಿ, ಪರಿವೀಕ್ಷಣೆ

ರಾಜ್ಯ(ಮಂಡ್ಯ)ಅ 26 :- ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಉಂಟಾಗಿರುವ ಹಿನ್ನೆಲೆಯಲ್ಲಿ  ಜಿಲ್ಲಾಧಿಕಾರಿ ಎಸ್.ಅಶ್ವತಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರವಾಹ ಪರಿಸ್ಥಿತಿ ವೀಕ್ಷಿಸಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಹಾನಿಗೊಳಗಾದ ಬೆಳಗೊಳ,ನೆಲಮನೆ,ಬಲ್ಲೇನಹಳ್ಳಿ, ಚಿಂದಾಗಿರಿ ಕೊಪ್ಪಲು, ಚಿಕ್ಕಾಡೆ, ಪಾಂಡವಪುರ ಪ್ರದೇಶಗಳಿಗೆ ಭೇಟಿ ನೀಡಿ ಕೃಷಿ ಬೆಳೆ ಜೊತೆಗೆ ಆಸ್ತಿ ಪಾಸ್ತಿ ಮತ್ತು ಮನೆಗಳಿಗೆ ಹಾನಿಗಳ ಪರಿವೀಕ್ಷಣೆ ನಡೆಸಿದರು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ, ತಹಶೀಲ್ದಾರ್ ಶ್ವೇತಾ ಎನ್ ರವೀಂದ್ರ,ಪ್ರಮೋದ್ ಪಾಟೀಲ್, ಜಂಟಿ ಕೃಷಿ ನಿರ್ದೇಶಕರಾದ ಬಿ.ಎಸ್ .ಚಂದ್ರಶೇಖರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: