ಕರ್ನಾಟಕಪ್ರಮುಖ ಸುದ್ದಿ

ರಾಜ್ಯೋತ್ಸವ ಗೀತಗಾಯನ ಕಾರ್ಯಕ್ರಮ

ರಾಜ್ಯ(ಶಿವಮೊಗ್ಗ), ಅ.25 :- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2020-21ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಜಿಲ್ಲೆಯಾದ್ಯಂತ ವಿಶೇಷ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು  ನಗರದ ಕುವೆಂಪು ರಂಗಮಂದಿರದಲ್ಲಿ  ಪ್ರಹ್ಲಾದ್ ದೀಕ್ಷಿತ್ ಮತ್ತು ತಂಡ, ಶಿವಮೊಗ್ಗ ಇವರು ರಾಜ್ಯೋತ್ಸವ ಗೀತಗಾಯನ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ರಂಗಸಮಾಜದ ಸದಸ್ಯರಾದ ಹಾಲಸ್ವಾಮಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ರಾಮಕೃಷ್ಣ ಹೆಚ್.ಎಸ್., ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹಾಲಾಡಿ, ರಾಗರಂಜಿನಿ ಸಂಸ್ಥೆಯ ಸದಸ್ಯ ಬಾಲಚಂದ್ರ, ಇಲಾಖಾ ಸಿಬ್ಬಂದಿಗಳು ಹಾಜರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: