ಮೈಸೂರು

ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಣೆ : ಡಾ. ಬಗಾದಿ ಗೌತಮ್

ಮೈಸೂರು, ಅ. 25 :- ನವೆಂಬರ್ 01ರಂದು ಕನ್ನಡ ರಾಜ್ಯೋತ್ಸವವನ್ನು ಕಳೆದ ಬಾರಿಯಂತೆ ಅಚ್ಚುಕಟ್ಟಾಗಿ ನಡೆಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಹೇಳಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಕನ್ನಡ ರಾಜ್ಯೋತ್ಸವ ಆಚರಣೆಯ ಸಂಬಂಧ ನಡೆದ  ಪೂರ್ವಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಅಂದು ಬೆಳಿಗ್ಗೆ 08:30ರ ವೇಳೆಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿರಾದ ಎಸ್.ಟಿ. ಸೋಮಶೇಖರ್ ಹಾಗೂ ಇತರ ಗಣ್ಯರು ಅರಮನೆಯ ಆವರಣದಲ್ಲಿರುವ ಶ್ರೀ ಭುವನೇಶ್ವರಿ ದೇವಿ ದರ್ಶನ ಪಡೆದು, ನಂತರ ಕೋಟೆ ಆಂಜನೇಯ ಸ್ವಾಮಿ ದೇವಾಸ್ಥಾನದ ಮುಂಭಾಗ ನಡೆಯುವ ಸಮಾರಂಭದಲ್ಲಿ ಭಾಗವಹಿಸುವರು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾಪಂಚಾಯಿತಿಯ ಸಿಇಒ ಎ.ಎಂ. ಯೋಗೀಶ್, ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್. ಮಂಜುನಾಥಸ್ವಾಮಿ, ಮುಡಾ ಆಯುಕ್ತ ಡಾ.ಡಿ.ಬಿ. ನಟೇಶ್, ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಎಂ.ಕೆ. ಸವಿತಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಹೆಚ್. ಚೆನ್ನಪ್ಪ, ವಾರ್ತ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಆರ್. ರಾಜು, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗೋವಿಂದರಾಜು, ಕನ್ನಡಪರ ಹೋರಾಟಗಾರರಾದ ಮೂಗೂರು ನಂಜುಂಡಸ್ವಾಮಿ, ತಾಯೂರು ವಿಠ್ಠಲ ಮೂರ್ತಿ, ಮೋಹನ್ ಕುಮಾರ್ ಗೌಡ, ಬಾಲಕೃಷ್ಣ, ಪರಮೇಶ್, ಬಾನು ಮೋಹನ್, ಶ್ರೀನಿವಾಸ ಮಿತ್ರ, ವೇಣುಗೋಪಾಲ್ ಸೇರಿದಂತೆ ಇತರರು ಹಾಜರಿದ್ದರು.

Leave a Reply

comments

Related Articles

error: