ಮೈಸೂರು

ರೆಡ್ ಕ್ರಾಸ್ ಸಂಸ್ಥೆಯಿಂದ ಅರಿವು-ತರಬೇತಿ ಕಾರ್ಯಕ್ರಮ

ಮೈಸೂರು, ಅ.26 :-. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಶತಮಾನೋತ್ಸವದ ಆಚರಣೆಯ ಹಿನ್ನಲೆಯಲ್ಲಿ 27-10-2021 ರಂದು ಎನ್.ಎಸ್.ಎಸ್, ಎನ್.ಸಿ.ಸಿ ಹಾಗೂ ಯುವ ರೆಡ್ ಕ್ರಾಸ್ ಘಟಕವೂ ಸೇರಿದಂತೆ 100 ಜನರಿಗೆ ಅರಿವು ಕಾರ್ಯಕ್ರಮ ಮತ್ತು ತರಬೇತಿ ನೀಡಲಾಗುವುದು 30-10-2021 ರಂದು ಯೂತ್ ಹಾಸ್ಟೇಲ್ ಅಸೋಸೀಯೇಷನ್, ಜಿಲ್ಲಾ ವಿಕಲಚೇತನ ಕೇಂದ್ರ ಸಿಬ್ಬಂದಿಗಳಿಗೆ ತರಬೇತಿ ನೀಡಲಾಗುವುದು ಎಂದು ಸಂಸ್ಥೆಯ ಕಾರ್ಯದರ್ಶಿ ಎಂ ಮಹದೇವಪ್ಪ ತಿಳಿಸಿದರು.
ಮೈಸೂರು ಪರ್ತಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು
ರೆಡ್ ಕ್ರಾಸ್ ಸಂಸ್ಥೆಯು ಇಂದು ಸಮಾಜ ಸೇವಾ ಸಂಸ್ಥೆಯಾಗಿ ರೂಪುಗೊಡಿದೆ. ದೇಶದ ಯಾವುದೇ ಭಾಗದಲ್ಲಿ ಯಾವುದೇ ರೀತಿಯ ಅನಾಹುತಗಳು ಸಂಭವಿಸಿದಾಗ ಜನರ ಕಷ್ಟಗಳಲ್ಲಿ ಧ್ವನಿಯಾಗಿ ಅವರ ಸೇವೆ ಮಾಡುವ ಸಂಸ್ಥೆಯಾಗಿದೆ. ಈ ಜನ ಸಮುದಾಯದಲ್ಲಿ ಸೇವಾ ಮನೋಭಾವ, ಭ್ರಾತೃತ್ವ , ಉದಾರತೆ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸುವ ನಿಟ್ಟಿನಲ್ಲಿ ಸಂಸ್ಥೆ ಸದಾ ಸಿದ್ಧವಾಗಿರುತ್ತದೆ ಎಂದರು.
ಕರ್ನಾಟಕದಲ್ಲಿ ರೆಡ್ ಕ್ರಾಸ್ ಸಂಸ್ಥೆ ರಕ್ತದಾನ ಬಗ್ಗೆ ಅರಿವು, ಗ್ರಾಮಾಂತರ ಪ್ರದೇಶಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ಔಷಧಿ ವಿತರಣೆ , ನೇತ್ರ ತಪಾಸಣೆ ಮತ್ತು ನೇತ್ರದಾನದ ಬಗ್ಗೆ ಅರಿವು , ಕ್ಯಾನ್ಸರ್ ರೋಗ ಪತ್ತೆಹಚ್ಚುವ ಶಿಬಿರ ನಡೆಸಲಾಗುತ್ತದೆ ಎಂದು ವಿವರಿಸಿದರು.
2011-12 ನೇಸಾಲಿನಿಂದ ಮೈಸೂರು ಜಿಲ್ಲೆಯಲ್ಲಿ ಯುವ ರೆಡ್ ಕ್ರಾಸ್ ಘಟಕಗಳನ್ನು ಸಕ್ರೀಯವಾಗಿ ಪ್ರಾರಂಭಿಸಲಾಯಿತು. 2011-12 ನೇ ಸಾಲಿನಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಅಂಗವಿಕಲರ ಪುನರ್ ವಸತಿ ಕೇಂದ್ರವನ್ನು ರೆಡ್ ಕ್ರಾಸ್ ಮುಖಾಂತರ ನಡೆಸಲು ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿತ್ತು .
ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ದೃಷ್ಠಿಯಿಂದ ಜಿಲ್ಲಾಮಟ್ಟ, ರಾಜ್ಯ ಮಟ್ಟದ ಯುವ ರೆಡ್ ಕ್ರಾಸ್ ಪ್ರೇರಣ ಶಿಬಿರಗಳನ್ನು ಆಯೋಜಿಸಲಾಗುತ್ತದೆ . ವಿದ್ಯಾರ್ಥಿಗಳಲ್ಲಿ ಬುದ್ಧಿ ಕೌಶಲ್ಯತೆ ಹೆಚ್ಚಲು ಕಾಲೇಜುಮಟ್ಟ, ಜಿಲ್ಲಾಮಟ್ಟ, ರಾಜ್ಯ ಮಟ್ಟದಲ್ಲಿ ರಸಪ್ರಶ್ನೆ ಕಾರ್ಯಕ್ರಮವನ್ನು 2022 ನೇ ಜನವರಿ ಮಾಹೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಆಯೋಜನೆ ಮಾಡಿಕೊಂಡಿದೆ ಎಂದು ತಿಳಿಸಿದರು.

Leave a Reply

comments

Related Articles

error: