ಕರ್ನಾಟಕಪ್ರಮುಖ ಸುದ್ದಿ

ಕನ್ನಡಕ್ಕಾಗಿ ನಾವು’ ಗೀತಗಾಯನ ಕಾರ್ಯಕ್ರಮ

ರಾಜ್ಯ(ಮಡಿಕೇರಿ )ಅ.27:-ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ವತಿಯಿಂದ ‘ಕನ್ನಡ ರಾಜ್ಯೋತ್ಸವದ ಅಂಗವಾಗಿ ‘ಕನ್ನಡಕ್ಕಾಗಿ ನಾವು’ ಅಭಿಯಾನದ ಸಾಂಸ್ಕತಿಕ ಹಾಗೂ ಬೀದಿ ನಾಟಕ ಜಾಗೃತಿ ಕಾರ್ಯಕ್ರಮವು ಕುಶಾಲನಗರದ ಕೊಡಗು ಜಿಲ್ಲಾ ವಿದ್ಯಾ ಸಾಗರ ಕಲಾ ವೇದಿಕೆ ವತಿಯಿಂದ ಮಂಗಳವಾರ ಜರುಗಿತು.
ಮಾಲ್ದಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಮೀರ್, ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾದ ವಿಜಯ್ ಕುಮಾರ್ ಅವರು ಕಂಜರ ನುಡಿಸುವ ಮೂಲಕ ಚಾಲನೆ ನೀಡಿದರು.
ಗ್ರಾ.ಪಂ.ಸದಸ್ಯರಾದ ಮೊಹಮದ್ದಲಿ, ಶಿಕ್ಷಕರರಾದ ಈಶ್ವರಿ, ಧನ್ಯ, ಅಮರಯ್ಯ, ಪ್ರತಿಮಾ, ಸೋನಿ, ಪ್ರಸನ್ನ ಇತರರು ಇದ್ದರು. ಪ್ರೌಢಶಾಲಾ ಸಹ ಶಿಕ್ಷಕರಾದ ಮಹಮದ್ ಶರೀಫ್ ಅವರು ಮಾತನಾಡಿದರು.
ಕೊಡಗು ಜಿಲ್ಲಾ ವಿದ್ಯಾಸಾಗರ ಕಲಾವೇದಿಕೆಯ ಇ.ರಾಜು ಮತ್ತು ತಂಡದವರಿಂದ ಕನ್ನಡಕ್ಕಾಗಿ ನಾವು ಅಭಿಯಾನ ಕುರಿತು ಗೀತಗಾಯನ ಮತ್ತು ಬೀದಿ ನಾಟಕ ಪ್ರದರ್ಶಿಸಲಾಯಿತು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: