ಕರ್ನಾಟಕಪ್ರಮುಖ ಸುದ್ದಿ

ಕನ್ನಡ ರಾಜ್ಯೋತ್ಸವ; ಪಥ ಸಂಚಲನ ಪೂರ್ವ ತಯಾರಿಗೆ ಸೂಚನೆ

ರಾಜ್ಯ(ಹಾಸನ) ನ.27:- ಜಿಲ್ಲಾ ಕ್ರೀಡಾಂಗಣದಲ್ಲಿ ನ.1 ರಂದು ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಆಕರ್ಷಕ ಪಥಸಂಚಲನ ಮೂಡಿಬರುವಂತೆ ಪೂರ್ವ ತಯಾರಿ ನಡೆಸಲು ಜಿಲ್ಲಾ ಹೆಚ್ಚುವರಿ ಪೋಲಿಸ್ ಅಧೀಕ್ಷಕರಾದ ಬಿ.ಎನ್.ನಂದಿನಿ ಅವರು ಸೂಚಿಸಿದ್ದಾರೆ.

ಜಿಲ್ಲಾ ಪೊಲೀಸ್ ಕಚೇರಿಯಲ್ಲಿಂದು ಕನ್ನಡ ರಾಜ್ಯೋತ್ಸವದ ಪಥ ಸಂಚಲನ ಕುರಿತು ನಡೆದ ಸಭೆಯ ಅಧ್ಯಕ್ಷತೆವಹಿಸಿ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು ಸಿದ್ದತೆಯಲ್ಲಿ ಯಾವುದೇ ಕೋರತೆಯಿಲ್ಲದಂತೆ ವ್ಯವಸ್ಥೆ ಕೈಗೊಳ್ಳಬೇಕು ಅ.28,29,30 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಪೂರ್ವ ತಾಲೀಮು ನಡೆಸುವಂತೆ ಅವರು ತಿಳಿಸಿದರು.

ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಮಂಜುನಾಥ್, ಡಿ.ವೈ.ಎಸ್ಪಿ. ಪುಟ್ಟಸ್ವಾಮಿಗೌಡ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಂ. ಡಿ. ಸುದರ್ಶನ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.(ಜಿ.ಕೆ,ಎಸ್.ಎಚ್)

Leave a Reply

comments

Related Articles

error: