ಮೈಸೂರು

ತಮಗಾದ ಅನ್ಯಾಯ ಪ್ರಶ್ನಿಸಿದ್ದಕ್ಕೆ 12ಕುಟುಂಬ ಗಳಿಗೆ ಬಹಿಷ್ಕಾರ

ಮೈಸೂರು,ಅ.27:- ಸುಮಾರು 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಮೂಗೂರು ಗ್ರಾಮದಲ್ಲಿ ನಡೆದಿದೆ.
ತಮಗಾದ ಅನ್ಯಾಯವನ್ನು ಪ್ರಶ್ನಿಸಿದ್ದ ಕಾರಣಕ್ಕೆ ಅದೇ ಗ್ರಾಮದ ಜನರು ಬಹಿಷ್ಕಾರ ಹಾಕಿದ್ದಾರೆ ಎನ್ನಲಾಗುತ್ತಿದೆ. ಗ್ರಾಮ ಪಂಚಾಯತ್ ಸದಸ್ಯೆಯ ಕುಟುಂಬಕ್ಕೂ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ. ಬಹಿಷ್ಕಾರಕ್ಕೆ ಒಳಾಗಿರುವ ಕುಟುಂಬದ ಸದಸ್ಯರನ್ನು ಯಾರೂ ಮಾತನಾಡಿಸುವಂತಿಲ್ಲ. ಶುಭ ಸಮಾರಂಭಗಳಿಗೆ ಆಹ್ವಾನಿಸುವಂತಿಲ್ಲ, ನೆರವು ನೀಡುವಂತಿಲ್ಲ.
ಬಹಿಷ್ಕಾರಕ್ಕೊಳಗಾದವರು ವಿವಾಹವೊಂದರಲ್ಲಿ ಭಾಗಿಯಾಗಿದ್ದಕ್ಕೆ 25 ಸಾವಿರ ರೂ. ದಂಡ ವಿಧಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ಬಹಿಷ್ಕಾರಕ್ಕೆ ಒಳಗಾದ ಕುಟುಂಬದವರು ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡಿದ್ದಾರೆ.
ತಮ್ಮ ಜಾಗದಲ್ಲಿ ವಾಲ್ಮೀಕಿ ಭವನ ಕಟ್ಟಲು ಮುಂದಾದಾಗ ಬಹಿಷ್ಕಾರಕ್ಕೆ ಒಳಾಗಿರುವ ಕುಟುಂಬಗಳು ಪ್ರಶ್ನೆ ಮಾಡಿದ್ದು, ಈ ವೇಳೆ ಪರಿಹಾರ ಕೊಡುವುದಾಗಿ ತಿಳಿಸಿದ್ದರಂತೆ. ಆದರೆ ಇದೀಗ ಪರಿಹಾರವು ಲಭ್ಯವಾಗಿಲ್ಲ.
ಇದೀಗ ಪರಿಹಾರವು ಇಲ್ಲ, ಜಾಗವು ನಿಮ್ಮದಲ್ಲ ಎನ್ನುತ್ತಿದ್ದಾರಂತೆ. ಹೀಗಾಗಿ ಕುಟುಂಬಗಳು ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿವೆ. ಪರಿಶಿಷ್ಟ ವರ್ಗ ಕಲ್ಯಾಣ ಇಲಾಖೆ ಅಧಿಕಾರಿಗಳ ಕುಮ್ಮಕ್ಕಿನಿಂದ ಭವನ ಕಟ್ಟುತ್ತಿದ್ದಾರೆಂದು ಆರೋಪಿಸಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: