ದೇಶಪ್ರಮುಖ ಸುದ್ದಿಮನರಂಜನೆ

ಡ್ರಗ್ ಕೇಸ್ ಪ್ರಕರಣ : ಇಂದು ಮಧ್ಯಾಹ್ನ ಆರ್ಯನ್ ಖಾನ್ ಜಾಮೀನು ಅರ್ಜಿಯ ವಿಚಾರಣೆ

ದೇಶ(ಮುಂಬೈ)ಅ.27:-   ಡ್ರಗ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿಯ ವಿಚಾರಣೆ ಇಂದು ಮಧ್ಯಾಹ್ನ 2.50 ನಡೆಯಲಿದೆ.

ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಆರ್ಯನ್ ಖಾನ್ ಅವರ ಜಾಮೀನು ಅರ್ಜಿಯನ್ನು ಮಂಗಳವಾರ ಬಾಂಬೆ ಹೈಕೋರ್ಟ್ ವಿಚಾರಣೆ ನಡೆಸಿತ್ತು. ಭಾರತದ ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಅವರು ಆರ್ಯನ್ ಖಾನ್ ಪ್ರಕರಣ ಕುರಿತು ಹೋರಾಟ ನಡೆಸಿದ್ದರು. ಆದರೆ ಮಂಗಳವಾರವೂ ಯಾವುದೇ ಫಲಿತಾಂಶ ಸಿಕ್ಕಿಲ್ಲ. ಬುಧವಾರ ಮಧ್ಯಾಹ್ನ 2.30ರಿಂದ ಈ ಪ್ರಕರಣದ ವಿಚಾರಣೆ ಆರಂಭವಾಗಲಿದೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: