ಕರ್ನಾಟಕಪ್ರಮುಖ ಸುದ್ದಿ

27 ಸಚಿವರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಪ್ರಮುಖಸುದ್ದಿ,ರಾಜ್ಯ(ಬೆಂಗಳೂರು) ಮೇ,4:- ಪೊಲೀಸ್ ಅಧಿಕಾರಿಗಳ ಅಕ್ರಮ ವರ್ಗಾವಣೆಯಲ್ಲಿ ಸಚಿವರ ಪಾತ್ರವಿರುವ ಬಗ್ಗೆ ಆರೋಪಿಸಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಒಟ್ಟು 27 ಸಚಿವರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಅಖಿಲ ಭಾರತ ಪೊಲೀಸ್ ಮಹಾಸಭಾ ಅಧ್ಯಕ್ಷ ಶಶಿಧರ್ ಲೋಕಾಯುಕ್ತರಿಗೆ ದೂರು ನೀಡಿದ್ದು, ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ಅಕ್ರಮ ಎಸಗಿದ ಇವರ ವಿರುದ್ಧ  ಕ್ರಮ ಕೈಗೊಳ್ಳುಬೇಕೆಂದು ಆಗ್ರಹಿಸಿದ್ದಾರೆ. ಹೈಕೋರ್ಟ್‍ನ ನಿರ್ದೇಶನದಂತೆ ದೂರು ನೀಡಿರುವುದಾಗಿ ಶಶಿಧರ್ ತಿಳಿಸಿದ್ದು,ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ಅಕ್ರಮದ ಬಗ್ಗೆ ದೂರುದಾರರು ಈ ಹಿಂದೆ ಹೈಕೋರ್ಟ್‍ನಲ್ಲಿ ರಿಟ್ ಅರ್ಜಿ ಹಾಕಿದ್ದರು ಎಂದು ತಿಳಿದುಬಂದಿದೆ. ಲೋಕಾಯುಕ್ತಕ್ಕೆ ದೂರು ಸಲ್ಲಿಸುವಂತೆ ಹೈಕೋರ್ಟ್ ನಿರ್ದೇಶನ ನೀಡಿತ್ತು ಎನ್ನಲಾಗಿದೆ. –(ವರದಿ:ಕೆ.ಎಸ್,ಎಸ್.ಎಚ್)

Leave a Reply

comments

Related Articles

error: