ದೇಶಪ್ರಮುಖ ಸುದ್ದಿಮನರಂಜನೆ

ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಇಂದು

ದೇಶ(ಮುಂಬೈ)ಅ.28:- ಮುಂಬೈ ತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಿಂಗಳ ಆರಂಭದಲ್ಲಿ ಬಂಧಿತರಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್​ ಖಾನ್​ ಜಾಮೀನು ಅರ್ಜಿ ವಿಚಾರಣೆ ಬುಧವಾರ ಬಾಂಬೆ ಹೈಕೋರ್ಟ್​ನಲ್ಲಿ ನಡೆದಿದ್ದು, ದೀರ್ಘ ವಿಚಾರಣೆ ಇಂದು ನಡೆಯಲಿದೆ.
ಹೀಗಾಗಿ ಆರ್ಯನ್​ ಖಾನ್​ ಮತ್ತೊಂದು ದಿನ ಜೈಲಿನಲ್ಲೇ ಇದ್ದರು.
ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಅವರು ಆರ್ಯನ್ ಖಾನ್ ಚಿಕ್ಕ ವಯಸ್ಸಿನ ಹುಡುಗನಾಗಿದ್ದಾನೆ. ಹಾಗಾಗಿ ಅವನನ್ನು ಜೈಲಿಗೆ ಕಳುಹಿಸುವ ಬದಲು ಪುನರ್ವಸತಿ ನಿಲಯಕ್ಕೆ ಕಳುಹಿಸಬೇಕು ಎಂದು ವಾದ ಮಾಡಿದರು. ಅಲ್ಲದೇ ಆರ್ಯನ್ ಖಾನ್‌ ಬಂಧನಕ್ಕೆ ಸೂಕ್ತ ಕಾರಣ ನೀಡಿಲ್ಲ. ಬಂಧನಕ್ಕೂ ಮುನ್ನ ಸೂಕ್ತ ಕಾರಣ ತಿಳಿಸಬೇಕಿತ್ತು. ಬಂಧನಕ್ಕೆ ಸೂಕ್ತ ಕಾರಣ ನೀಡದೆ ಎನ್‌ಸಿಬಿ ದಾರಿ ತಪ್ಪಿಸಿದೆ ಎಂದು ಮುಕುಲ್‌ ವಾದಿಸಿದರು.
ಆರೋಪಿಗಳ ಪರವಾಗಿ ಮುಕುಲ್ ರೋಹಟಗಿ, ಅಮಿತ್ ದೇಸಾಯಿ ಮತ್ತು ಅಲಿ ಕಾಶಿಫ್ ಖಾನ್ ದೇಶಮುಖ್ ಅವರು ಮಾಡಿದ ವಾದಗಳಿಗೆ ಇಂದು ಉತ್ತರಿಸುವುದಾಗಿ ಎನ್‌ಸಿಬಿ ಪರವಾಗಿ ಹಾಜರಾದ ಎಎಸ್‌ಜಿ ಅನಿಲ್ ಸಿಂಗ್ ನ್ಯಾಯಾಲಯಕ್ಕೆ ತಿಳಿಸಿದರು. ” ಗುರುವಾರ ಮಧ್ಯಾಹ್ನ 2.30ರ ನಂತರ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಮೂರ್ತಿ ನಿತಿನ್ ಸಾಂಬ್ರೆ ಅವರಿದ್ದ ಏಕಸದಸ್ಯ ಪೀಠ ತಿಳಿಸಿದೆ. (ಏಜೆನ್ಸಿಸ್, ಎಸ್.ಎಚ್)

Leave a Reply

comments

Related Articles

error: