ಕರ್ನಾಟಕದೇಶಪ್ರಮುಖ ಸುದ್ದಿ

ಇಂದು ಮತ್ತೆ ತೈಲಬೆಲೆಗಳ ದರದಲ್ಲಿ ಏರಿಕೆ

ದೇಶ(ನವದೆಹಲಿ)ಅ.28:- ಇಂದು ಮತ್ತೆ ತೈಲಬೆಲೆಗಳ ದರದಲ್ಲಿ ಏರಿಕೆ ಕಂಡು ಬಂದಿದ್ದು,  ಪೆಟ್ರೋಲ್ ದರದಲ್ಲಿ 36 ಪೈಸೆ ಮತ್ತು ಡೀಸೆಲ್ ದರದಲ್ಲಿ 37 ಪೈಸೆ ಏರಿಕೆಯಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ ಮತ್ತು ಲೀಟರ್ ಡೀಸೆಲ್ ದರದಲ್ಲಿ ಕ್ರಮವಾಗಿ 35 ಪೈಸೆ ಹೆಚ್ಚಳವಾಗಿದೆ. ಇದರಂತೆ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ 108.2ಕ್ಕೆ ಮತ್ತು ಡೀಸೆಲ್ ದರ 97.03ಕ್ಕೆ ಏರಿಕೆಯಾಗಿದೆ.

ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 114.1 ರೂಗೆ ಏರಿಕೆಯಾಗಿದ್ದು, ಡೀಸೆಲ್ ದರ 105.08ರೂ ಗೆ ಏರಿಕೆಯಾಗಿದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 108.75 ರೂಗೆ ಮತ್ತು ಡೀಸೆಲ್ ದರ ಪ್ರತೀ ಲೀಟರ್ ಗೆ 100.1ರೂಗೆ ಏರಿಕೆಯಾಗಿದೆ.

ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 105.1 ರೂಗೆ ಏರಿಕೆಯಾಗಿದ್ದು, ಡೀಸೆಲ್ ದರ 101.22ರೂಗೆ ಏರಿಕೆಯಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ರೂ. 112.02ಗೆ ಮತ್ತು ಡೀಸೆಲ್ ದರ 102.94ಕ್ಕೆ ಏರಿಕೆಯಾಗಿದ್ದು, ಗ್ರಾಹಕರು ಕಂಗಾಲಾಗಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: