ದೇಶಪ್ರಮುಖ ಸುದ್ದಿ

ಕಂದಕಕ್ಕೆ ಉರುಳಿ ಬಿದ್ದ ಮಿನಿ ಬಸ್ : 8ಮಂದಿ ಸ್ಥಳದಲ್ಲೇ ಸಾವು; ಪ್ರಧಾನಿ ಸಂತಾಪ; ಮೃತರ ಕುಟುಂಬಕ್ಕೆ 2ಲಕ್ಷ ರೂ.ಘೋಷಣೆ

ದೇಶ(ಜಮ್ಮು)ಅ.28:- ಮಿನಿ ಬಸ್ ಒಂದು ಆಳವಾದ ಕಂದಕಕ್ಕೆ ಉರುಳಿ ಬಿದ್ದು 8 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದು ಹಲವರು ಗಾಯಗೊಂಡ ಘಟನೆ   ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.

ಜಮ್ಮು ವಿನ ತತ್ರಿಯಿಂದ ಬಸ್ಸು ದೋಡಾ ಕಡೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬಸ್ಸು ತತ್ರಿ-ದೊಡಾ ರಸ್ತೆಯಲ್ಲಿ ಸೈ ಗ್ವಾರಿಯ ಚೆನಬ್ ನದಿಯ ಹತ್ತಿರ ಆಳವಾದ ಕಂದಕಕ್ಕೆ ಉರುಳಿ ಬಿದ್ದಿದೆ.

ದೋಡಾದ ಹೆಚ್ಚುವರಿ ಎಸ್ಪಿ   ಸ್ಥಳದಲ್ಲಿ ಇನ್ನೂ ರಕ್ಷಣಾ ಕಾರ್ಯ ಮುಂದುವರಿದಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.   ಕೇಂದ್ರ ಸಚಿವ ಡಾ ಜಿತೇಂದ್ರ ಸಿಂಗ್ ಅವರು 8 ಮಂದಿ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಈಗಷ್ಟೇ ದೋಡಾ ಜಿಲ್ಲಾಧಿಕಾರಿ ವಿಕಾಸ್ ಶರ್ಮ ಅವರ ಜೊತೆ ಮಾತನಾಡಿದ್ದು ಗಾಯಗೊಂಡವರನ್ನು ದೋಡಾದ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಸಿಗಬೇಕಿದೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ   ಸಂತಾಪ ಸೂಚಿಸಿದ್ದಾರಲ್ಲದೇ, ಪ್ರಧಾನ ಮಂತ್ರಿ ವಿಪತ್ತು ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿಗಳನ್ನು ಮೃತರ ಕುಟುಂಬಸ್ಥರಿಗೆ ಘೋಷಿಸಿದ್ದಾರೆ. ಗಾಯಗೊಂಡವರ ಚಿಕಿತ್ಸೆಗೆ ತಲಾ 50 ಸಾವಿರ ರೂಪಾಯಿ ಪ್ರಕಟಿಸಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: