ಕರ್ನಾಟಕಪ್ರಮುಖ ಸುದ್ದಿ

ಇಂದಿನಿಂದ ಹಾಸನಾಂಬೆಯ ದರ್ಶನ : ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ಭಾಗ್ಯ

ರಾಜ್ಯ(ಹಾಸನ),ಅ.28:- ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನಕ್ಕೆ ಬಾಗಿಲು ತೆರೆಯಲಾಗಿದ್ದು ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ಭಾಗ್ಯ ಸಿಗಲಿದೆ.

ಇಂದು  ಅರ್ಚಕರು ಪೂಜೆ ಸಲ್ಲಿಸಿ ಹಾಸನದ ಹಾಸನಾಂಬೆ ದೇಗುಲದ ಬಾಗಿಲು  ತೆರೆದಿದ್ದಾರೆ. ಮೊದಲ ದಿನ   ಗಣ್ಯರು, ಶಾಸಕರು, ಸಂಸದರು, ನಗರಸಭೆ ಸದಸ್ಯರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶವಿತ್ತು. ಇಂದು ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಇರಲಿಲ್ಲ. 12 ಗಂಟೆ 17 ನಿಮಿಷಕ್ಕೆ ಹಾಸನಾಂಬೆ ಗರ್ಭಗುಡಿಯ ಬಾಗಿಲು ತೆರೆಯಲಾಗಿದೆ.  ಬನ್ನಿ ಕಡಿದು ಶುಭ ಮುಹೂರ್ತ ದಂದು ದರ್ಶನೋತ್ಸವಕ್ಕೆ ಚಾಲನೆ ನೀಡಲಾಗಿದೆ.

ಆದಿಚುಂಚನಗಿರಿ ಶ್ರೀಗಳಾದ ಡಾ.ನಿರ್ಮಲಾನಂದನಾಥ ಸ್ವಾಮಿಜಿಯವರ ಸಮ್ಮುಖದಲ್ಲಿ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯನವರ ನೇತೃತ್ವದಲ್ಲಿ ದೇಗುಲದ ಬಾಗಿಲು ತೆರೆಯಲಾಗಿದೆ. ಸಚಿವರಾದ ಗೋಪಾಲಯ್ಯ, ಮಾಧುಸ್ವಾಮಿ ಅವರು ತಾಯಿ ಹಾಸನಾಂಬೆಯ ದರ್ಶನ ಪಡೆದರು.

ಪ್ರಸಿದ್ಧ ಹಾಸನಾಂಬ ದೇವಿಯ ಮಹೋತ್ಸವ ಇಂದಿನಿಂದ ಆರಂಭವಾಗಲಿದ್ದು, ನವೆಂಬರ್ 6ರವರೆಗೂ ಈ ಅದ್ಧೂರಿ ಉತ್ಸವ ನಡೆಯಲಿದೆ. ಕೊರೊನಾ ಹಿನ್ನೆಲೆ ಈ ಬಾರಿ ಸರಳವಾಗಿ ಜಾತ್ರೆ ನಡೆಸಲು ಜಿಲ್ಲಾಡಳಿತ ನಿರ್ಧರಿಸಿದ್ದು ಹಾಸನಾಂಬೆ ದರ್ಶನಕ್ಕೆ ವಿಶೇಷ ಪಾಸ್ ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ಎರಡೂ ಲಸಿಕೆ ಪಡೆದವರಿಗೆ ಮಾತ್ರ ಹಾಸನಾಂಬೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: