ಕ್ರೀಡೆಪ್ರಮುಖ ಸುದ್ದಿವಿದೇಶ

ಆಸ್ಟ್ರೇಲಿಯಾ ತಂಡಕ್ಕೆ ಆಘಾತ : ವೇಗಿ ಮಿಚೆಲ್ ಸ್ಟಾರ್ಕ್ ಗೆ ಗಾಯ

ವಿದೇಶ(ದುಬೈ)ಅ.28:- ದಕ್ಷಿಣಾ ಆಫ್ರಿಕಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ವಿಶ್ವಕಪ್ ಅಭಿಯಾನ ಆರಂಭಿಸಿದ್ದ ಆಸ್ಟ್ರೇಲಿಯಾಕ್ಕೆ ಆಘಾತವಾಗಿದೆ.

ತಂಡದ ಪ್ರಮುಖ ವೇಗಿ ಮಿಚೆಲ್ ಸ್ಟಾರ್ಕ್ ಗಾಯಗೊಂಡಿದ್ದಾರೆ.  ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದ ವೇಳೆ ಸ್ಟಾರ್ಕ್ ಗಾಯಗೊಂಡಿದ್ದು ಅರ್ಧದಲ್ಲೇ ಅಭ್ಯಾಸ ನಿಲ್ಲಿಸಿ ಮೈದಾನದಿಂದ ತೆರಳಿದ್ದಾರೆ.

ಇಂದು ಶ್ರೀಲಂಕಾ ಹಾಗೂ ಆಸ್ಟ್ರೇಲಿಯಾ ಮುಖಾಮುಖಿಯಾಗಲಿದ್ದು ಇದಕ್ಕೂ ಮುನ್ನ ಮಿಚೆಲ್ ಸ್ಟಾರ್ಕ್ ಗಾಯಗೊಂಡಿರುವುದು ಆಸ್ಟ್ರೇಲಿಯಾಕ್ಕೆ ಸಂಕಷ್ಟ ತಂದಿಟ್ಟಿದೆ. ಮೊದಲ ಪಂದ್ಯದಲ್ಲಿ ಮಿಚೆಲ್ ಸ್ಟಾರ್ಕ್ ಉತ್ತಮ ಬೌಲಿಂಗ್ ದಾಳಿ ನಡೆಸಿದ್ದರು. ಈ ಹಿಂದೆಯೂ ಗಾಯದ ಸಮಸ್ಯೆಯಿಂದ ಬಳಲಿದ್ದ ಕಾರಣ ಅವರು ಐಪಿಎಲ್ ನಲ್ಲಿ ಭಾಗವಹಿಸಲು ಹಿಂದೇಟು ಹಾಕಿದ್ದರು. ಟಿ.20ವಿಶ್ವಕಪ್ ಗಾಗಿ ಭರ್ಜರಿ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದರು. ಇಂದು ನಡೆಯಲಿರುವ ಪಂದ್ಯದಲ್ಲಿ ಸ್ಟಾರ್ಕ್ ಕಣಕ್ಕಿಳಿಯುವುದು ಅನುಮಾನ ಎನ್ನಲಾಗಿದೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: