ದೇಶಪ್ರಮುಖ ಸುದ್ದಿವಿದೇಶ

ಜಿ-20 ಶೃಂಗಸಭೆ:    ರೋಮ್ ನಲ್ಲಿ  ನಡೆಯಲಿರುವ  ಜಿ-20 ಶೃಂಗಸಭೆಯಲ್ಲಿ ಭಾಗವಹಿಸಲಿರುವ ಪ್ರಧಾನಿ ಮೋದಿ

ದೇಶ(ನವದೆಹಲಿ)ಅ.29:- ಐದು ದಿನಗಳ ವಿದೇಶ ಪ್ರವಾಸಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ತಡರಾತ್ರಿ ದೆಹಲಿಯಿಂದ ಹೊರಟಿದ್ದಾರೆ.   ಅವರು ಇಟಲಿಯಲ್ಲಿ ಜಿ 20 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.  ಅಲ್ಲಿ ಅವರು ಸಾಂಕ್ರಾಮಿಕ, ಸುಸ್ಥಿರ ಅಭಿವೃದ್ಧಿ ಮತ್ತು ಹವಾಮಾನ ಬದಲಾವಣೆಯಿಂದ ಜಾಗತಿಕ ಆರ್ಥಿಕ ಮತ್ತು ಆರೋಗ್ಯ ಚೇತರಿಕೆಯ ಕುರಿತು ನಡೆಯುವ ಚರ್ಚೆಯಲ್ಲಿ ಇತರ  ಜಿ- 20 ನಾಯಕರೊಂದಿಗೆ ಸೇರಿಕೊಳ್ಳಲಿದ್ದಾರೆ.

ಇಟಲಿ ಪ್ರಧಾನಿ ಮಾರಿಯೋ ಡ್ರಾಘಿ ಅವರ ಆಹ್ವಾನದ ಮೇರೆಗೆ ಅಕ್ಟೋಬರ್ 30-31 ರವರೆಗೆ ರೋಮ್‌ ನಲ್ಲಿ ನಡೆಯಲಿರುವ 16 ನೇ ಜಿ 20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಇಟಲಿ ಪ್ರಧಾನಿ ಮಾರಿಯೋ ಡ್ರಾಘಿ ಅವರೊಂದಿಗೂ ಪ್ರಧಾನಿ ಸಭೆ ನಡೆಸಲಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ವ್ಯಾಟಿಕನ್ ನಗರದಲ್ಲಿ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾಗಲಿದ್ದಾರೆ.

ಪ್ರವಾಸಕ್ಕೆ ತೆರಳುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು  ನಾನು ರೋಮ್‌ ನಲ್ಲಿ ನಡೆಯಲಿರುವ 16ನೇ ಜಿ-20 ಶೃಂಗಸಭೆಯಲ್ಲಿ ಭಾಗವಹಿಸಲಿದ್ದೇನೆ ಎಂದು ಹೇಳಿದ್ದಾರೆ. ಈ ಸಮಯದಲ್ಲಿ, ಸಾಂಕ್ರಾಮಿಕ ರೋಗಗಳಿಂದ ಜಾಗತಿಕ ಆರ್ಥಿಕ ಮತ್ತು ಆರೋಗ್ಯ ಚೇತರಿಕೆ, ಸುಸ್ಥಿರ ಅಭಿವೃದ್ಧಿ ಮತ್ತು ಹವಾಮಾನ ಬದಲಾವಣೆಯ ಕುರಿತು ಜಿ-20 ನಾಯಕರೊಂದಿಗೆ ಚರ್ಚೆ ನಡೆಯಲಿದೆ.   ಅಕ್ಟೋಬರ್ 29 ರಿಂದ 31 ರವರೆಗೆ ರೋಮ್ ಮತ್ತು ವ್ಯಾಟಿಕನ್ ಸಿಟಿಗೆ ಭೇಟಿ ನೀಡುತ್ತೇನೆ. ಅದರ ನಂತರ   ಬೋರಿಸ್ ಜಾನ್ಸನ್ ಅವರ ಆಹ್ವಾನದ ಮೇರೆಗೆ  ನವೆಂಬರ್ 1 ರಿಂದ 2 ರವರೆಗೆ ಗ್ಲಾಸ್ಗೋಗೆ ಭೇಟಿ ನೀಡಲಿದ್ದೇನೆ ಎಂದಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: