ಕರ್ನಾಟಕಪ್ರಮುಖ ಸುದ್ದಿಮನರಂಜನೆಮೈಸೂರು

ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಸಂತಾಪ

ಮೈಸೂರು, ಅ.29:-ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧಾನಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ನಾಡು ಕಂಡ ಅಪ್ರತಿಮ‌ ನಟ, ಕನ್ನಡಿಗರ ಕಣ್ಮಣಿ, ಕನ್ನಡ ಚಿತ್ರರಂಗದ ಯುವರತ್ನ ಪುನೀತ್ ರಾಜ್ ಕುಮಾರ್ ಅವರ ನಿಧನ ಬರಸಿಡಿಲು ಬಡಿದಂತಾಗಿದೆ.

ಪುನೀತ್ ಅವರ ನಿಧನದ ಈ ದಿನ ಕೇವಲ ಚಿತ್ರರಂಗದ ಪಾಲಿಗೆ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗ ಮತ್ತು ಕರ್ನಾಟಕದ ಪಾಲಿಗೆ ಕರಾಳ ದಿನ. ಕನ್ನಡ ಭಾಷೆ, ನೆಲ, ಜಲದ ವಿಚಾರ ಬಂದಾಗ ಮುಂಚೂಣಿಯಲ್ಲಿ ನಿಲ್ಲುತ್ತಿದ್ದರು. ಎಲ್ಲರ ಮನಗಳಲ್ಲಿ ನೆಲೆಸಿರುವ ಅಪ್ಪು ಅವರ ನಿಧನದ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗ, ಅಭಿಮಾನಿಗಳಿಗೆ ಆ ದೇವರು ಕರುಣಿಸಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ.

ನಟನಾಗಿ ಮಾತ್ರವಲ್ಲದೆ ಸಮಾಜಮುಖಿ ಕಾರ್ಯಗಳನ್ನು ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದರು. ಅವರ ಸೇವೆ, ತ್ಯಾಗ ಎಂದಿಗೂ ಮರೆಯಲು ಸಾಧ್ಯವಿಲ್ಲ. ಕನ್ನಡ ಚಿತ್ರರಂಗದಲ್ಲಿ ಪುನೀತ್ ಹೆಸರು ಅಜರಾಮರವಾಗಿ ಉಳಿಯಲಿದೆ.

ಬಾಲ ನಟನಾಗಿಯೇ ಎಲ್ಲರ ಮನ ಗೆದ್ದಿದ್ದ ಪುನೀತ್ ರಾಜ್ ಕುಮಾರ್ ಅವರ ನಿಧನದಿಂದ ಅಭಿಮಾನಿಗಳು ತಾಳ್ಮೆ ಕಳೆದುಕೊಳ್ಳಬಾರದು. ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡಬಾರದು. ಶಾಂತಿ ಕಾಪಾಡಿ, ಪುನೀತ್ ಅವರ ಆತ್ಮಕ್ಕೆ ಶಾಂತಿ ಕೋರಬೇಕು ಎಂದಿದ್ದಾರೆ.

 

Leave a Reply

comments

Related Articles

error: