ಕರ್ನಾಟಕಪ್ರಮುಖ ಸುದ್ದಿಮನರಂಜನೆ

ಪವರ್ ಸ್ಟಾರ್ ಪುನೀತ್ ಓದಿಸುತ್ತಿದ್ದ 1800ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊತ್ತ ನಟ ವಿಶಾಲ್

ರಾಜ್ಯ( ಬೆಂಗಳೂರು),ನ.1: – ಪುನೀತ್ ರಾಜ್​​ಕುಮಾರ್ ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊರುತ್ತೇನೆ ಎಂದು ತಮಿಳು ನಟ ವಿಶಾಲ್​ ಘೋಷಣೆ ಮಾಡಿದ್ದಾರೆ.
ಮುಂದಿನ ವರ್ಷದಿಂದ 1800 ಮಕ್ಕಳ ಜವಾಬ್ದಾರಿ ನನ್ನದು ಎಂದು ಅವರು ತಿಳಿಸಿದ್ದಾರೆ. ಹೃದಯಾಘಾತದಿಂದ ಪುನೀತ್ ರಾಜ್​ಕುಮಾರ್ ಅಕ್ಟೋಬರ್ 29 ರಂದು ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಪುನೀತ್ ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆ ತಾನು ಹೊರುವುದಾಗಿ ತಮಿಳು ನಟ ಹೇಳಿದ್ದಾರೆ.
ಪುನೀತ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ನಮನ ಸಲ್ಲಿಸುತ್ತ ಮಾತನಾಡಿದ ಅವರು ಈ ಮಕ್ಕಳ ವಿದ್ಯಾಭ್ಯಾಸದ ಹೊಣೆ ನನ್ನದು ಎಂದು ತಿಳಿಸಿದ್ದಾರೆ.  ಇಂಥದ್ದೊಂದು ಕಾರ್ಯಕ್ರಮದಲ್ಲಿ ಮಾತನಾಡಬೇಕಾಗುತ್ತದೆ ಎನ್ನುವ ಯಾವ ಅಂದಾಜಿರಲಿಲ್ಲ. ಪುನೀತ್ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿರುತ್ತಾರೆ ಎಂದು ವಿಶಾಲ್ ಹೇಳಿದರು. ಸೋಶಿಯಲ್ ಮೀಡಿಯಾದಲ್ಲಿಯೂ ಸಹ ವಿಶಾಲ್ ಕಾರ್ಯಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.

 

 

Leave a Reply

comments

Related Articles

error: