ಕರ್ನಾಟಕಪ್ರಮುಖ ಸುದ್ದಿಮನರಂಜನೆ

ಇಂದು ದಿ.ನಟ ಪುನೀತ್ ರಾಜಕುಮಾರ್ ಸಮಾಧಿಗೆ ಹಾಲು ತುಪ್ಪ ಕಾರ್ಯ

ರಾಜ್ಯ(ಬೆಂಗಳೂರು)ಅ.2:-  ದಿವಂಗತ ನಟ ಪುನೀತ್ ರಾಜಕುಮಾರ್ ಅವರ ಸಮಾಧಿಗೆ ಹಾಲು ತುಪ್ಪ ಕಾರ್ಯ ಇಂದು ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಇಂದು ಬೆಳಗ್ಗೆ 9 ಗಂಟೆಗೆ ಕಾರ್ಯದಲ್ಲಿ ರಾಜ್‌ ಕುಟುಂಬದವರು, ಸ್ನೇಹಿತರು, ಚಿತ್ರರಂಗದ ಸ್ನೇಹಿತರು ಭಾಗಿಯಾಗಲಿದ್ದಾರೆ‌. ಸದ್ಯಕ್ಕೆ ಇನ್ನೂ ಎರಡು ದಿನ ಅಭಿಮಾನಿಗಳಿಗೆ ಸಮಾಧಿ ದರ್ಶನಕ್ಕೆ ಅನುಮತಿಯಿಲ್ಲ. ಪುನೀತ್ ಸಮಾಧಿಗೆ ಕೊಯಮತ್ತೂರಿಂದ ವಿಶೇಷ ಹೂಗಳನ್ನು ತರಿಸಿ ಅಲಂಕರಿಸಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: