ಕರ್ನಾಟಕಪ್ರಮುಖ ಸುದ್ದಿ

ಭಾರತದ ಭದ್ರ ಬುನಾದಿಗೆ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಕೊಡುಗೆ ಅಪಾರ

ರಾಜ್ಯ(ಮಡಿಕೇರಿ )ನ.6:-ಭಾರತದ ಸಮಗ್ರತೆ ಮತ್ತು ಏಕತೆಗೆ ಹಾಗೂ ಅಖಂಡ ಭಾರತದ ಅಭಿವೃದ್ಧಿಗೆ ಶ್ರಮಿಸಿದ ಮಹಾನ್ ಚೇತನ ಸರ್ದಾರ್ ವಲ್ಲಬಾಯ್ ಪಟೇಲ್ ಎಂದು ಖ್ಯಾತ ಹಿರಿಯ ವಕೀಲ ನಿರಂಜನ್ ಅವರು ಹೇಳಿದರು.
ಕೊಡಗು ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ಏರ್ಪಡಿಸಲಾಗಿದ್ದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಬಾಯ್ ಪಟೇಲ್ ರವರ ಜನ್ಮದಿನಾಚರಣೆಯಲ್ಲಿ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.
ಭಾರತ ಬಲಿಷ್ಠವಾದ ಸೇನೆಯನ್ನು ಕಟ್ಟಲು ಕಾರಣರಾದ ಸರ್ಧಾರ್ ವಲ್ಲಭಭಾಯ್ ಪಟೇಲ್ ಅವರು ರಾಷ್ಟ್ರದ ಐಕ್ಯತೆಗೆ ಪ್ರಮುಖ ಪಾತ್ರ ವಹಿಸಿದ್ದರು. ಕಾಶ್ಮೀರದ ಸಮಸ್ಯೆಯನ್ನು ಬಗೆಹರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ವೇದಿಕೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಇದ್ದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ ಸ್ವಾಗತಿಸಿ, ವಂದಿಸಿದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: