ಮೈಸೂರು

ರಾಜ್ಯ ಮಟ್ಟದ ರ್ಯಾಲಿ: ಮೇ 8 ರಂದು

ಮೈಸೂರು,ಮೇ 5: ಸರ್ವೋಚ್ಛ ನ್ಯಾಯಾಲಯ ನೀಡಿರುವ ಬಡ್ತಿ ಮೀಸಲಾತಿ ತೀರ್ಪನ್ನು ವಿರೋಧಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ/ಎಸ್ಟಿ ನೌಕರರ ಸಮನ್ವಯ ಸಮಿತಿಯ ವತಿಯಿಂದ ಮೇ 8 ರಂದು ರಾಜ್ಯ ಮಟ್ಟದ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಉಪಾಧ್ಯಕ್ಷ ಕೆ.ಬಿ.ಪ್ರಕಾಶ್ ತಿಳಿಸಿದರು.

ಶುಕ್ರವಾರ ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆ.10.30 ಕ್ಕೆ ಬೆಂಗಳೂರಿನ ಸಂಗೊಳ್ಳಿರಾಯಣ್ಣ ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನವನದವರೆಗೆ ರ್ಯಾಲಿ ನಡೆಯಲಿದೆ. ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ವಿರುದ್ಧ ಸರ್ಕಾರವು ಸಂವಿಧಾನ ಪೀಠಕ್ಕೆ ಮೇಲ್ಮನವಿ ಸಲ್ಲಿಸಬೇಕು. ಕರ್ನಾಟಕ ರಾಜ್ಯದ 2002 ರ ಸಾಂದರ್ಭಿಕ ಜೇಷ್ಠತೆಯ ಕಾಯ್ದೆಗೆ ತಿದ್ದುಪಡಿ ತಂದು ಎಸ್ಸಿ/ಎಸ್ಟಿ ನೌಕರರ ಮುಂಬಡ್ತಿ ಸಂರಕ್ಷಿಸಲು ಸುಗ್ರೀವಾಜ್ಞೆ ಹೊರಡಿಸಬೇಕು. ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ನೀಡಬೇಕು ಎಂಬಿತ್ಯಾದಿ ಹಕ್ಕೊತ್ತಾಯಗಳ ಮನವಿ ಸಲ್ಲಿಸಲಾಗುತ್ತದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಸಂಚಾಲಕ ಪ್ರೊ.ಕೆ.ಸಿದ್ದರಾಜು, ಡಾ.ಮಂಗಳಮೂರ್ತಿ, ನಾಗಮಲ್ಲೇಶ್, ಶಿವಸಿದ್ದು ಹಾಜರಿದ್ದರು.-(ವರದಿ:ಎಲ್.ಜಿ)

Leave a Reply

comments

Related Articles

error: