ಕರ್ನಾಟಕಪ್ರಮುಖ ಸುದ್ದಿ

ಡಿ.18 ರಂದು ರಾಷ್ಟ್ರೀಯ ಲೋಕ್ ಅದಾಲತ್

ರಾಜ್ಯ(ಮಡಿಕೇರಿ)ನ.17:- ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜಿಲ್ಲೆಯ ಎಲ್ಲಾ ನ್ಯಾಯಾಲಯದ ಆವರಣಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಆಯೋಜಿಸಲಾಗುತ್ತಿದ್ದು, ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಡಿಸೆಂಬರ್, 18 ರಂದು ನಡೆಯುವ ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಸುಬ್ರಮಣ್ಯ ಅವರು ತಿಳಿಸಿದ್ದಾರೆ.
ವ್ಯಾಜ್ಯ ಪೂರ್ವ ಪ್ರಕರಣಗಳು

ಚೆಕ್ಕು ಅಮಾನ್ಯದ ಪ್ರಕರಣಗಳು ಯುಎಸ್ 138, ಆರ್ಥಿಕ ವಸೂಲಾತಿ ಪ್ರಕರಣಗಳು. ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ, ಕಾರ್ಮಿಕ ವಿವಾದಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು. ವಿದ್ಯುತ್ ಹಾಗೂ ನೀರಿನ ಶುಲ್ಕಗಳು. ಮೈನ್‍ಟೆನೆನ್ಸ್ ಪ್ರಕರಣಗಳು ಮತ್ತಿತರ ಪ್ರಕರಣಗಳು (ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ, ಕುಟುಂಬ ನ್ಯಾಯಾಲಯ ಹಾಗೂ ಇತರೆ ಸಿವಿಲ್ ಪ್ರಕರಣಗಳು)
ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು:-ರಾಜೀ ಆಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು ಯುಎಸ್ 138, ಆರ್ಥಿಕ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ/ ಕುಟುಂಬ ನ್ಯಾಯಾಲಯ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು (ಜಿಲ್ಲಾ ಹಾಗೂ ಉಚ್ಛ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಮಾತ್ರ) ಸಿವಿಲ್ ಪ್ರಕರಣಗಳು (ಬಾಡಿಗೆ, ಅನುಭೋಗದ ಹಕ್ಕುಗಳು ನಿರ್ಬಂಧಾಜ್ಞೆ ಮೊಕದ್ದಮೆಗಳು).
ಹೆಚ್ಚಿನ ಮಾಹಿತಿಗೆ ನ್ಯಾಯ ಸಂಯೋಗ, ಕಾನೂನು ನೆರವು ಘಟಕ(ಬಹುವಿಧ ಸೇವೆಗಳು-ಒಂದೇ ಸೂರಿನ ಅಡಿಯಲ್ಲಿ) ನ್ಯಾಯ ದೇಗುಲ, ಮೊದಲನೆ ಮಹಡಿ, ಎಚ್.ಸಿದ್ದಯ್ಯ ರಸ್ತೆ, ಬೆಂಗಳೂರು-560027, ದೂ.ಸಂ.080-22111730 ವೆಬ್‍ಸೈಟ್ www.kslsa.kar.nic.in ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳು ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಯವರನ್ನು ಹಾಗೂ ಸಹಾಯವಾಣಿ ಸಂಖ್ಯೆ 1800-425-90900 ನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಡಿಕೇರಿ ಅಥವಾ ತಾಲೂಕು ಕಾನೂನು ಸೇವಾ ಸಮಿತಿ ವಿರಾಜಪೇಟೆ ಮತ್ತು ಸೋಮವಾರಪೇಟೆ ಮತ್ತು ಸಹಾಯವಾಣಿ ಸಂಖ್ಯೆ 08272-222373 ನ್ನು ಸಂಪರ್ಕಿಸಬಹುದು ಎಂದು ಎನ್.ಸುಬ್ರಮಣ್ಯ ಅವರು ತಿಳಿಸಿದ್ದಾರೆ.
‘ಡಿಸೆಂಬರ್ 18 ರಂದು ರಾಜ್ಯಾದ್ಯಾಂತ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಲೋಕ ಅದಾಲತ್‍ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ತಾಲ್ಲೂಕು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.
ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ಪ್ರಕರಣ ರಾಜೀ ಮಾಡಿಕೊಳ್ಳುವ ಕುರಿತು ತಿಳಿಸುವ ಮೂಲಕ ಅಥವಾ ಅರ್ಜಿ ಸಲ್ಲಿಸುವ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಹತ್ತಿರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳು ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಅವರನ್ನು ಸಂಪರ್ಕಿಸುವಂತೆ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್.ಶಶಿಧರ್ ಶೆಟ್ಟಿ ಅವರು ತಿಳಿಸಿದ್ದಾರೆ.’
ಹೆಚ್ಚಿನ ಮಾಹಿತಿಗೆ www.kslsa.kar.nic.in ಸಹಾಯವಾಣಿ ಸಂಖ್ಯೆ 1800-425-90900 ಸಂಪರ್ಕಿಸಬಹುದಾಗಿದೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಚಟುವಟಿಕೆ ಬಗ್ಗೆ ಮತ್ತು ಕಾರ್ಯಕ್ರಮಗಳ ಬಗ್ಗೆ ತಿಳಿದುಕೊಳ್ಳಲು ಟೆಲಿಗ್ರಾಂ ಚಾನಲಿಗೆ ಮಾಹಿತಿ ಪಡೆಯಬಹುದಾಗಿದೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: