ಕರ್ನಾಟಕಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಇನ್ನೆರಡು ದಿನ ಗುಡುಗು ಸಹಿತ ಭಾರೀ ಮಳೆ

ರಾಜ್ಯ(ಬೆಂಗಳೂರು),ನ.17 :- ರಾಜ್ಯದ ರಾಜಧಾನಿಯಲ್ಲಿ ಇನ್ನೂ 2 ದಿನ ಗುಡುಗು ಸಹಿತಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಬೆಂಗಳೂರು ಹವಾಮಾನ ಇಲಾಖೆಯ ತಜ್ಞ ಸದಾನಂದ ಅಡಿಗ ಮಾಧ್ಯಮದೊಂದಿಗೆ ಮಾತನಾಡಿ ಇಂದು ಬೆಂಗಳೂರಿನಲ್ಲಿ 27.6% ಉಷ್ಣಾಂಶ ಮತ್ತು19 %ಕನಿಷ್ಠ ಉಷ್ಣಾಂಶ ದಾಖಲಾಗಿದೆ. 7.1 ಮಿಲಿ ಮಿಟರ್ ಮಳೆಯಾಗಿದೆ, ಹಾಗೇ ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2.6 ಮತ್ತು ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ 8.2 ಮಿಲಿ ಮಿಟರ್ ಮಳೆಯಾಗಿದೆ. ಯಲಹಂಕ 4.2 , ಹೆಬ್ಬಾಳ 2.2 ಮಿಲಿ ಮಿಟರ್ ಮಳೆಯಾಗಿದೆ. ಬಂಗಾಳಕೊಲ್ಲಿ ಯಲ್ಲಿ ವಾಯುಭಾರದ ಕುಸಿತದಿಂದ ನಾಳೆ ತಮಿಳುನಾಡು ಮತ್ತು ಆಂಧ್ರ ಕರಾವಳಿ ಪ್ರದೇಶವನ್ನು ದಾಟುವುದರ ಹಿನ್ನಲೆಯಲ್ಲಿ ಬೆಂಗಳೂರಿಗೆ ನಾಳಿದ್ದು ನ.19 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಮತ್ತು ನಾಳೆ ಮೋಡಕವಿದ ವಾತಾವರಣ ಮುಂದುವರಿಯಲ್ಲಿದ್ದು ಕೆಲ ಬಾರಿ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇರುತ್ತದೆ ಎಂದು ತಿಳಿಸಿದ್ದಾರೆ. (ಎಸ್.ಎಂ,ಎಸ್.ಎಚ್)

Leave a Reply

comments

Related Articles

error: