
ದೇಶಪ್ರಮುಖ ಸುದ್ದಿ
ಮಾಜಿ ಪ್ರಧಾನಿ ಇಂದಿರಾಗಾಂಧಿ ಜನ್ಮದಿನ : ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಸ್ಮರಿಸಿದ ಗಣ್ಯರು
ದೇಶ(ನವದೆಹಲಿ),ನ.19:- ನವೆಂಬರ್ 19 ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜನ್ಮದಿನ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಎನ್ಸಿಪಿ ನಾಯಕ ಮತ್ತು ಮಹಾರಾಷ್ಟ್ರ ಸರ್ಕಾರದ ಸಚಿವ ನವಾಬ್ ಮಲಿಕ್, ರಾಜಸ್ಥಾನ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ಅಶೋಕ್ ಗೆಹ್ಲೋಟ್ ಇಂದಿರಾಗಾಂಧಿ ಅವರನ್ನು ಸ್ಮರಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟ್ಟರ್ ನಲ್ಲಿ “ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರ ಜನ್ಮದಿನದಂದು ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಮ್ಮ ಅಜ್ಜಿ ಹಾಗೂ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರನ್ನು ಸ್ಮರಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ “ದೇಶದ ಭರವಸೆಯ ಪ್ರಧಾನ ಮಂತ್ರಿಗಳಲ್ಲಿ ಇಂದಿರಾಗಾಂಧಿ ಅವರ ಹೆಸರನ್ನು ಸುವರ್ಣಾಕ್ಷರಗಳಲ್ಲಿ ಕೆತ್ತಲಾಗಿದೆ, ಜನರ ನಡುವೆ ಬದುಕುವುದು ಮತ್ತು ಅವರ ಸುಖ-ದುಃಖಗಳನ್ನು ಹಂಚಿಕೊಳ್ಳುವುದು ಅವರ ದೊಡ್ಡ ಶಕ್ತಿಯಾಗಿತ್ತು. ಅಜ್ಜಿ, ನಿಮ್ಮ ಧೈರ್ಯ ಯಾವಾಗಲೂ ನಮಗೆ ಸ್ಫೂರ್ತಿ ನೀಡುತ್ತದೆ. ಇಂದಿಗೂ ನಾನು ನಿಮ್ಮೊಂದಿಗೆ ನನ್ನನ್ನು ಕಂಡುಕೊಳ್ಳುತ್ತೇನೆ. ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆದುಕೊಂಡಿದ್ದಾರೆ. (ಏಜೆನ್ಸೀಸ್,ಎಸ್.ಎಚ್)