ಕರ್ನಾಟಕಪ್ರಮುಖ ಸುದ್ದಿ

ಅನುದಾನ ಸದುಪಯೋಗಕ್ಕೆ ಸೂಚನೆ

ರಾಜ್ಯ(ಹಾಸನ), ನ.22:- ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಲ್ಲಿ ಬಿಡುಗಡೆಯಾಗಿರುವಂತಹ ಹಣವನ್ನು ಸದುಪಯೋಗಪಡಿಸಿಕೊಂಡು ನಿಗದಿತ ಗುರಿ ಸಾಧಿಸುವಂತೆ ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಮ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ 2021- 22 ನೇ ಸಾಲಿನ ಎಸ್. ಸಿ ಎಸ್. ಪಿ, ಟಿ. ಎಸ್. ಪಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು ವಿವಿಧ ಇಲಾಖೆಗಳಲ್ಲಿ ಬಾಕಿ ಇರುವ ಅನುದಾನವನ್ನು ಡಿಸೆಂಬರ್ ಅಂತ್ಯದೊಳಗೆ ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಮಂಜುನಾಥ್, ಮತ್ತಿತರ ಅಧಿಕಾರಿಗಳು ಹಾಜರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: