
ಕರ್ನಾಟಕಪ್ರಮುಖ ಸುದ್ದಿಮನರಂಜನೆ
ದಿ. ನಟ ರೆಬಲ್ ಸ್ಟಾರ್ ಅಂಬರೀಶ್ ಪುಣ್ಯಸ್ಮರಣೆ : ಪೂಜೆ ಸಲ್ಲಿಸಿದ ಕುಟುಂಬಸ್ಥರು
ರಾಜ್ಯ(ಬೆಂಗಳೂರು),ನ.24 :- ಇಂದು ದಿ. ನಟ ರೆಬಲ್ ಸ್ಟಾರ್ ಅಂಬರೀಶ್ ಅವರ ಮೂರನೇ ವರ್ಷದ ಪುಣ್ಯಸ್ಮರಣೆಯ ಹಿನ್ನಲೆಯಲ್ಲಿ ಅಂಬಿಯ ಕುಟುಂಬಸ್ಥರೆಲ್ಲರೂ ಸೇರಿ ಅಂಬಿಯ ಸಮಾಧಿಗೆ ಪೂಜೆಯನ್ನು ಸಲ್ಲಿಸಿದ್ದಾರೆ.
ಇಂದು ಮಾಜಿ ಸಚಿವ ಮತ್ತು ನಟ,ಮಂಡ್ಯದ ಗಂಡು,ರೆಬಲ್ ಸ್ಟಾರ್ ಅಂಬರೀಶ್ ಅವರ ಮೂರನೇ ವರ್ಷದ ಪುಣ್ಯಸ್ಮರಣೆಯ ಹಿನ್ನಲೆಯಲ್ಲಿ ಇಂದು ಅಂಬರೀಶ್ ಅವರ ಪತ್ನಿ ಸಂಸದೆ ಸುಮಲತಾ ಮತ್ತು ಮಗ ಅಭಿಷೇಕ್ ಅವರುಗಳು ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಶ್ ಅವರ ಸಮಾಧಿಯ ಮುಂದೆ ಅಂಬಿಗೆ ಪ್ರಿಯವಾದ ತಿನಿಸುಗಳನ್ನು ಇರಿಸಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. ಈ ವೇಳೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಜೊತೆಯಲ್ಲಿದ್ದರು. (ಎಸ್.ಎಂ,ಎಸ್.ಎಚ್)