ಮೈಸೂರು

ಸಕ್ರಿಯ ರಾಜಕಾರಣದಲ್ಲಿದ್ದು ಪಕ್ಷ ಸಂಘಟನೆ ಮಾಡುತ್ತೇನೆ : ವಿ.ಶ್ರೀನಿವಾಸ್ ಪ್ರಸಾದ್

ಮೈಸೂರು: ಮೇ, 6:- ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ನೇಮಕಗೊಂಡ ವಿ.ಶ್ರೀನಿವಾಸ ಪ್ರಸಾದ್ ರಾಜ್ಯ ಕಾರ್ಯಕಾರಿಣಿ ಸಭೆಗೆ ಆಗಮಿಸಿದರು. ಮೈಸೂರಿನ ರಾಜೇಂದ್ರ ಕಲಾಮಂದಿರದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯುತ್ತಿದ್ದು, ವಿ.ಶ್ರೀನಿವಾಸ್ ಪ್ರಸಾದ್ ಪಾಲ್ಗೊಂಡಿದ್ದಾರೆ. ಬಿಜೆಪಿ ಸೇರಿದ ಮೇಲೆ, ಉಪಾಧ್ಯಕ್ಷನಾದ ತರುವಾಯ ಇದು ನಾನು ಪಾಲ್ಗೊಳ್ಳುತ್ತಿರುವ ಮೊದಲ ಕಾರ್ಯಕಾರಣಿ ಸಭೆ ಎಂದು ಅವರು ತಿಳಿಸಿದರು.ವರಿಷ್ಠರು ಸ್ಥಾನ ನೀಡುವ ಕುರಿತು ಮಾತನಾಡಿದ್ದಾರೆ. ಆದರೆ ನನಗೆ ರಾಜ್ಯಸಭಾ  ಸ್ಥಾನದ ಬಗ್ಗೆ ಆಸಕ್ತಿ ಇಲ್ಲ, ಅದರ ಅವಶ್ಯಕತೆಯೂ ಇಲ್ಲ. ನಾನು ದೆಹಲಿಯಲ್ಲಿ 25  ವರ್ಷಗಳ ಕಾಲ ರಾಜಕಾರಣ ಮಾಡಿದ್ದೇನೆ. ಸಕ್ರಿಯವಾಗಿ ರಾಜಕಾರಣದಲ್ಲಿದ್ದು  ಪಕ್ಷ ಸಂಘಟನೆ ಮಾಡುತ್ತೇನೆ ಎಂದರು. ಪಕ್ಷದಲ್ಲಿ ನಾಯಕರ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು ವರಿಷ್ಠರ ಗಮನದಲ್ಲಿ ಇದೆ. ಅವರು ಎಲ್ಲವನ್ನೂ ಸರಿ ಮಾಡುತ್ತಾರೆ ಎಂದು ತಿಳಿಸಿದರು. ಶ್ರೀನಿವಾಸ್ ಪ್ರಸಾದ್ ಬೆಂಬಲಿಗರು ಅವರ ಜೊತೆ ಇದ್ದರು. – (ವರದಿ: ಕೆ.ಎಸ್,ಎಸ್.ಎಚ್)

Leave a Reply

comments

Related Articles

error: