ಕರ್ನಾಟಕಪ್ರಮುಖ ಸುದ್ದಿ

ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಹೊಸ ಕೋವಿಡ್-19 ಪ್ರಕರಣ ಇಲ್ಲ

ರಾಜ್ಯ(ಮಡಿಕೇರಿ) ನ.27:-ಜಿಲ್ಲೆಯಲ್ಲಿ ಶುಕ್ರವಾರ ಹೊಸ ಕೋವಿಡ್-19 ಪ್ರಕರಣ ಕಂಡು ಬಂದಿಲ್ಲ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 35,420 ಆಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 05 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 34,937 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ಒಟ್ಟು 432 ಮರಣ ಪ್ರಕರಣಗಳು ವರದಿಯಾಗಿದೆ. 51 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 01 ಸಾವು ಉಂಟಾಗಿದ್ದು, ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 10 ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.0.00 ಆಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: