ಕರ್ನಾಟಕಪ್ರಮುಖ ಸುದ್ದಿ

ಜನರಲ್ ತಿಮ್ಮಯ್ಯ ಅವರ ಸ್ಮಾರಕ ಭವನ ಮತ್ತಷ್ಟು ಅಭಿವೃದ್ಧಿಗೆ ಶ್ರಮ: ಕೆ.ಸಿ.ಬೆಳ್ಳಿಯಪ್ಪ

ರಾಜ್ಯ(ಮಡಿಕೇರಿ) ನ.27:-ವೀರ ಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಸ್ಮಾರಕ ಭವನವನ್ನು ಮತ್ತಷ್ಟು ಅಭಿವೃದ್ಧಿ ಪಡಿಸುವಲ್ಲಿ ಶ್ರಮಿಸಬೇಕಿದೆ ಎಂದು ಜನರಲ್ ತಿಮ್ಮಯ್ಯ ಅವರ ಮೊಮ್ಮಗ ಕೆ.ಸಿ.ಬೆಳ್ಳಿಯಪ್ಪ ಅವರು ತಿಳಿಸಿದ್ದಾರೆ.
ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನಕ್ಕೆ  ಭೇಟಿ ನೀಡಿ, ವೀಕ್ಷಿಸಿದ ನಂತರ ಸುದ್ದಿಗಾರರ ಜೊತೆ ಅವರು ಮಾತನಾಡಿದರು.
ಭಾರತೀಯ ಸೇನಾ ಕ್ಷೇತ್ರದಲ್ಲಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರು ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಆ ದಿಸೆಯಲ್ಲಿ ಸೇನಾ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯ ಮಹತ್ತರ ಸಾಧನೆ ಒಳಗೊಂಡ ಛಾಯಾಚಿತ್ರ ಸಹಿತ ಮಾಹಿತಿಯನ್ನು ಮತ್ತಷ್ಟು ಅಳವಡಿಸಬೇಕಿದೆ ಎಂದು ಕೆ.ಸಿ.ಬೆಳ್ಳಿಯಪ್ಪ ಅವರು ಹೇಳಿದರು.
ಜನರಲ್ ಕೆ.ಎಸ್.ತಿಮ್ಮಯ್ಯ ಅವರು ಭಾರತೀಯ ಸೇನಾ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದು, ಇವರ ಸೇನಾ ಕ್ಷೇತ್ರದಲ್ಲಿನ ಮಹತ್ತರ ಸಾಧನೆ ಮತ್ತು ಮೈಲುಗಲ್ಲಿನ ಮತ್ತಷ್ಟು ಮಾಹಿತಿ ಒಳಗೊಳ್ಳಬೇಕಿದೆ. ಆ ನಿಟ್ಟಿನಲ್ಲಿ ಸ್ಮಾರಕ ಭವನ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಜನರಲ್ ತಿಮ್ಮಯ್ಯ ಅವರ ಮೊಮ್ಮಗ ಕೆ.ಸಿ.ಬೆಳ್ಳಿಯಪ್ಪ ಅವರು ನುಡಿದರು.
‘ನಗರದ ಸನ್ನಿಸೈಡ್‍ನಲ್ಲಿರುವ ಜನರಲ್ ತಿಮ್ಮಯ್ಯ ಸ್ಮಾರಕ ಭವನವನ್ನು ರಾಷ್ಟ್ರದಲ್ಲಿಯೇ ಅತ್ಯುತ್ತಮ ಮಾದರಿ ಸ್ಮಾರಕ ಭವನವನ್ನಾಗಿ ಮಾಡುವಲ್ಲಿ ಎಲ್ಲರೂ ಶ್ರಮಿಸಬೇಕಿದೆ. ಆ ದಿಸೆಯಲ್ಲಿ ಯುವ ಜನರಿಗೆ ಸ್ಮಾರಕ ಭವನ ಸ್ಫೂರ್ತಿಯಾಗಬೇಕು ಎಂದರು.’
ಜನರಲ್ ತಿಮ್ಮಯ್ಯ ಸ್ಮಾರಕ ಭವನ ವೀಕ್ಷಣೆಗೂ ಮೊದಲು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರನ್ನು ಭೇಟಿ ಮಾಡಿ ಜನರಲ್ ತಿಮ್ಮಯ್ಯ ಸ್ಮಾರಕ ಭವನ ಅಭಿವೃದ್ಧಿ ಸಂಬಂಧಿಸಿದಂತೆ ಸುದೀರ್ಘವಾಗಿ ಚರ್ಚಿಸಿದರು.
ಜನರಲ್ ತಿಮ್ಮಯ್ಯ ಸ್ಮಾರಕ ಭವನವನ್ನು ಮತ್ತಷ್ಟು ಅಭಿವೃದ್ಧಿ ಪಡಿಸುವಲ್ಲಿ ಜಿಲ್ಲಾಡಳಿತ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ, ಜನರಲ್ ತಿಮ್ಮಯ್ಯ ಅವರ ಸಂಬಂಧಿಗಳಾದ ಕಂಬಿರಂಡ ನಿತಿನ್ ಗಣಪತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಣಜೂರು ಮಂಜುನಾಥ್ ಇತರರು ಇದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: