ದೇಶಪ್ರಮುಖ ಸುದ್ದಿ

ಇಂದು ಸಿಂಘು ಗಡಿಯಲ್ಲಿ ಯುನೈಟೆಡ್ ಕಿಸಾನ್ ಮೋರ್ಚಾದ ಸಭೆ : ಪಿಎಂ ಭೇಟಿ ಮಾಡಿದ ಹರ್ಯಾಣ ಸಿಎಂ

ದೇಶ(ನವದೆಹಲಿ),ನ.27:- ಇಂದು ಸಿಂಘು ಗಡಿಯಲ್ಲಿ ಯುನೈಟೆಡ್ ಕಿಸಾನ್ ಮೋರ್ಚಾ ಸಭೆ ನಡೆಯಲಿದೆ. ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವುದಾಗಿ ಸರ್ಕಾರ ಘೋಷಿಸಿದ ನಂತರವೂ ಎಂಎಸ್‌ಪಿ ಖಾತರಿಗಾಗಿ ರೈತರ ಆಂದೋಲನ ಮುಂದುವರೆದಿದೆ.
ಏತನ್ಮಧ್ಯೆ, ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಎಂಎಸ್‌ಪಿ ಅಂದರೆ ಕನಿಷ್ಠ ಬೆಂಬಲ ಬೆಲೆಗೆ ಸಂಬಂಧಿಸಿದಂತೆ ಕಾನೂನನ್ನು ಮಾಡುವ ಸಾಧ್ಯತೆ ಬಹಳ ಕಡಿಮೆ ಎಂದು ಹೇಳಿದ್ದಾರೆ. ರೈತರ ಉತ್ಪನ್ನಗಳನ್ನು ಖರೀದಿಸಲು ಸರ್ಕಾರದ ಮೇಲೆ ಒತ್ತಡವನ್ನು ಹೆಚ್ಚಿಸುವ ಕಾರಣ ರೈತರಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿಪಡಿಸುವ ಕಾನೂನನ್ನು ರಚಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಎಂಎಸ್‌ಪಿ ಸಕ್ರಮಗೊಳಿಸುವ ಬಗ್ಗೆ ಇದುವರೆಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಕೃಷಿ ಅರ್ಥಶಾಸ್ತ್ರಜ್ಞರು ಕೂಡ ಈ ಬಗ್ಗೆ ವಿಭಿನ್ನ ಅಭಿಪ್ರಾಯಗಳನ್ನು ಹೊಂದಿದ್ದಾರೆ. ಹೀಗಿರುವಾಗ ಈ ಕುರಿತು ಕರಡು ಕಾನೂನನ್ನು ಸಿದ್ಧಪಡಿಸಲು ಸಾಧ್ಯವಾಗುತ್ತಿಲ್ಲ. ಎಂಎಸ್‌ ಪಿಯ ಮೇಲೆ ಕಾನೂನು ಮಾಡಲು ಸಾಧ್ಯವಿಲ್ಲ ಏಕೆಂದರೆ ಅದರ ಮೇಲೆ ಕಾನೂನು ಮಾಡಿದರೆ, ರೈತರ ಉತ್ಪನ್ನಗಳನ್ನು ಯಾರೂ ಖರೀದಿಸಲು ಸಾಧ್ಯವಾಗದಿದ್ದರೆ ಅದನ್ನು ಸರ್ಕಾರವೇ ಖರೀದಿಸಬೇಕಾಗುತ್ತದೆ. ಅಗತ್ಯಕ್ಕೆ ತಕ್ಕಂತೆ ಬೆಳೆ ಖರೀದಿಸುತ್ತೇವೆ ಎಂದಿದ್ದಾರೆ.
ಹರಿಯಾಣ ಮುಖ್ಯಮಂತ್ರಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ನವದೆಹಲಿಯ ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಈ ಸಂದರ್ಭ ಹರಿಯಾಣದಲ್ಲಿ ಮುಂಬರುವ ಅಭಿವೃದ್ಧಿ ಯೋಜನೆಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲಾಗಿದೆ, ಖಟ್ಟರ್ ಅವರು ಟ್ವೀಟ್‌ ನಲ್ಲಿ ತಿಳಿಸಿದ್ದಾರೆ, “ನಾನು ದೆಹಲಿಯ ಪ್ರಧಾನಿ ನಿವಾಸಕ್ಕೆ ತಲುಪಿ ಅವರನ್ನು ಭೇಟಿ ಮಾಡಿದ್ದೇನೆ. ಈ ಸಂದರ್ಭದಲ್ಲಿ ಹರಿಯಾಣದಲ್ಲಿ ಪ್ರಸ್ತುತ ಮತ್ತು ಮುಂಬರುವ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಲಾಗಿದೆ. ಹಲವು ಪ್ರಮುಖ ಸಮಸ್ಯೆಗಳ ಕುರಿತು ಅವರೊಂದಿಗೆ ವಿವರವಾಗಿ ಚರ್ಚಿಸಲಾಗಿದೆ’ ಎಂದಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: