ದೇಶಪ್ರಮುಖ ಸುದ್ದಿ

ಕೊರೋನಾ ಹೊಸ ರೂಪಾಂತರ ‘ಓಮಿಕ್ರಾನ್’ ನಿಂದ ಜನರಿಗೆ ಭೀತಿ : ಕೋವಿಡ್ -19 ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ ಸಭೆ

ದೇಶ(ನವದೆಹಲಿ),ನ.27:- ಕೊರೋನಾ ಹೊಸ ರೂಪಾಂತರವಾದ ಒಮಿಕ್ರಾನ್‌ ಕುರಿತಂತೆ ಪ್ರಪಂಚದ ಅನೇಕ ದೇಶಗಳು ಅಲರ್ಟ್ ಆಗಿವೆ.
ಏತನ್ಮಧ್ಯೆ ಓಮಿಕ್ರಾನ್ ರೂಪಾಂತರಿ ಗಮನದಲ್ಲಿಟ್ಟುಕೊಂಡು, ಭಾರತದಿಂದಲೂ ಹಲವು ಪ್ರಮುಖ ಕ್ರಮಗಳನ್ನು ತೆಗೆದುಕೊಳ್ಳಬಹುದು. ಇಂತಹ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೇಶದ ಕೊರೋನಾ ಬಗ್ಗೆ ಪ್ರಸ್ತುತ ಪರಿಸ್ಥಿತಿ ಮತ್ತು ಲಸಿಕೆಗಳ ಸ್ಥಿತಿಯ ಕುರಿತು ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿಯವರ ಈ ಸಭೆಯು ಸುಮಾರು 10.30 ಕ್ಕೆ ಪ್ರಾರಂಭವಾಗಲಿದೆ. ಈ ಸಭೆಯಲ್ಲಿ ಲಸಿಕೆ ಬಗ್ಗೆ ಉನ್ನತ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುತ್ತದೆ ಎನ್ನಲಾಗಿದೆ.
ಈ ಸಭೆಯಲ್ಲಿ, ದೇಶದಲ್ಲಿ ಕೊರೊನಾ ವೈರಸ್ ವಿರುದ್ಧದ ಸಿದ್ಧತೆಗಳನ್ನು ಸಹ ಪರಿಶೀಲಿಸಲಾಗುತ್ತಿದೆ. ಪ್ರಸ್ತುತ, ದೇಶದ ಹಲವು ರಾಜ್ಯಗಳಲ್ಲಿ ಕೊರೋನಾ ಪ್ರಕರಣಗಳು ಬಹಳ ವೇಗವಾಗಿ ಹೆಚ್ಚುತ್ತಿವೆ, ಆದ್ದರಿಂದ ಪ್ರಧಾನಿ ಮೋದಿಯವರ ಈ ಸಭೆಯನ್ನು ಬಹಳ ಮಹತ್ವದ್ದಾಗಿದೆ ಎಂದು ಪರಿಗಣಿಸಲಾಗಿದೆ. ಈ ಸಭೆಯಲ್ಲಿ, ಕೊರೋನಾದಿಂದ ಉಂಟಾಗುವ ಇತರ ಪರಿಸ್ಥಿತಿಯ ಬಗ್ಗೆಯೂ ಪ್ರಧಾನಿ ಮೋದಿ ಚರ್ಚಿಸಲಿದ್ದಾರೆ. ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಂತಹ ಪರಿಸ್ಥಿತಿಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗದಂತೆ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಈ ಸಭೆಯಲ್ಲಿ ಪ್ರಧಾನಿ ಮೋದಿ ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡುವ ಸಾಧ್ಯತೆ ಇದೆ.
ಪ್ರಧಾನಿ ಮೋದಿಯವರ ಈ ಸಭೆಯಲ್ಲಿ ಉನ್ನತ ಅಧಿಕಾರಿಗಳಲ್ಲದೆ, ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ಆರೋಗ್ಯ ಇಲಾಖೆಯ ಅನೇಕ ಹಿರಿಯ ಅಧಿಕಾರಿಗಳು ಉಪಸ್ಥಿತರಿರುತ್ತಾರೆ. ಈ ಸಭೆಯಲ್ಲಿ, ಕೊರೋನಾ ಮತ್ತು ಲಸಿಕೆಗಳ ಸ್ಥಿತಿಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಹಲವು ಸಲಹೆಗಳನ್ನು ನೀಡುವ ಸಾದ್ಯತೆ ಇದೆ. ಓಮಿಕ್ರಾನ್ ಪ್ರವೇಶ ಹಿನ್ನೆಲೆಯಲ್ಲಿ ಭಾರತ ಅಲರ್ಟ್ ಆಗಿದೆ ಎಂದು ಹೇಳಲಾಗುತ್ತಿದೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: