ಕರ್ನಾಟಕಪ್ರಮುಖ ಸುದ್ದಿಮೈಸೂರು

ವಿಧಾನ ಪರಿಷತ್ತು ಚುನಾವಣೆಯಲ್ಲಿ ಯಾರೊಂದಿಗೂ ಹೊಂದಾಣಿಕೆ ಇಲ್ಲ : ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು, ನ.27:- ವಿಧಾನ ಪರಿಷತ್ತು ಚುನಾವಣೆಯಲ್ಲಿ ಯಾರೊಂದಿಗೂ ಹೊಂದಾಣಿಕೆ ಇಲ್ಲ  ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಇಂದು ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ನಾವು ಯಾವ ಕ್ಷೇತ್ರದಲ್ಲೂ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳಲ್ಲ. ನಮ್ಮ ಬೆಂಬಲಿತರಿಗೆ ಸಿಂಗಲ್ ವೋಟ್ ಹಾಕಲು ಸೂಚನೆ ಕೊಟ್ಟಿದ್ದೇನೆ ಎಂದು ತಿಳಿಸಿದರು.  ಬಿಜೆಪಿ – ಜೆಡಿಎಸ್ ನಡುವೆ ಒಳ ಒಪ್ಪಂದ ಇದ್ದೇ ಇದೆ. ಈ ಚುನಾವಣೆಯಲ್ಲಿ ಮಾತ್ರ ಅಲ್ಲ. ಇತ್ತೀಚೆಗೆ ನಡೆದ ಉಪಚುನಾವಣೆ ಸೇರಿದಂತೆ ಎಲ್ಲ ಚುನಾವಣೆಗಳಲ್ಲೂ ಅವರಿಬ್ಬರೂ ಒಳ ಒಪ್ಪಂದ ಮಾಡಿಕೊಂಡೇ ಚುನಾವಣೆ ಮಾಡಿದ್ದಾರೆ ಎಂದರು.

ಬೆಳಗಾವಿಯಲ್ಲಿ ಲಖನ್ ಜಾರಕಿಹೊಳಿ ಕಣಕ್ಕೆ ಇಳಿಸಿರೋದು ಬಿಜೆಪಿಯವರು. ನಮ್ಮವರು ನಮ್ಮ ಪರ ಕೆಲಸ ಮಾಡುತ್ತಿದ್ದಾರೆ. ಲಖನ್ ಜಾರಕಿಹೋಳಿ ಬಿಜೆಪಿಯಲ್ಲೇ ಇದ್ದವರು. ಹೀಗಾಗಿ ಗೊಂದಲ ಇರೋದು ಬಿಜೆಪಿಯಲ್ಲಿ ಎಂದರು.  ಕೊಡಗಿನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೇ ನೇರ ಹಣಾಹಣಿ ಇದೆ. ನಾವು ಕಳೆದ ಬಾರಿ ಅಲ್ಪ ಮತದಿಂದ ಸೋತಿದ್ದೇವೆ. ಈ ಬಾರಿ ನಮ್ಮ ಅಭ್ಯರ್ಥಿ ಗೆಲ್ಲಿಸಲು ಎಲ್ಲ ಪ್ರಯತ್ನ ಮಾಡುತ್ತೇವೆ. ಎ.ಮಂಜು ಕಾಂಗ್ರೆಸ್ ಸೇರಲ್ಲ‌. ಅವರು ಕಾಂಗ್ರೆಸ್‌ ಗೆ ಬರುವುದಾಗಿಯೂ ಕೇಳಿಲ್ಲ.  ಬಂದರೂ ನಾವು ಸೇರಿಸಿಕೊಳ್ಳಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಕೊಟ್ಟಿದ್ದೇವೆ. ಈ ಸರ್ಕಾರಕ್ಕೆ  ಅಧಿಕಾರದಲ್ಲಿರಲು ಯೋಗ್ಯತೆ ಇಲ್ಲ.  ಭ್ರಷ್ಟಾಚಾರ ಇದೆ. ಪಾರದರ್ಶಕತೆ ಇಲ್ಲ.   ಕೆಂಪಣ್ಣ ಅಂತ ನೋಂದಾಯಿತ ಗುತ್ತಿಗಾರರ ಸಂಘದ ಅಧ್ಯಕ್ಷರು ಪತ್ರ ಬರೆದಿದ್ದಾರೆ ಪ್ರಧಾನಿಗಳಿಗೆ.  6/7/2021ರಂದು ಬರೆದಿರುವುದು. ಇದು ಪತ್ರಿಕೆಗಳಲ್ಲಿ ಬಂದಿದೆ ಎಂದರು.

ರಾಜ್ಯ ಸರ್ಕಾರ ನಿರ್ದಿಷ್ಟ ಕಾರಣಗಳು ಇಲ್ಲದೇ ಇರುವುದಕ್ಕೆ ಗಂಭೀರವಾಗಿ ತೆಗೆದುಕೊಳ್ಳಬೇಕಾಗಿಲ್ಲ ಎಂದಿದೆ. ಅಂತ ಹೇಳಿದ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ  ಮತ್ತೆ ಸೆಕ್ರೆಟರಿಗೆ ಯಾಕ್ರೀ ತನಿಖೆಗೆ ಕೊಟ್ಟಿದ್ದೀರಿ ಎಂದು ಪ್ರಶ್ನಿಸಿದರು.   (ಕೆ.ಎಸ್,ಎಸ್.ಎಚ್)

 

Leave a Reply

comments

Related Articles

error: