ಮೈಸೂರು

ಎಟಿಎಂಇ ಇಂಜಿನಿಯರಿಂಗ್  ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ-ಸಂವಿಧಾನ ದಿನ ಆಚರಣೆ

ಮೈಸೂರು,ನ.27:- ಮೈಸೂರಿನ  ಬನ್ನೂರು ರಸ್ತೆಯಲ್ಲಿರುವ ಎಟಿಎಂಇ ಇಂಜಿನಿಯರಿಂಗ್  ಕಾಲೇಜಿನಲ್ಲಿ 66ನೇ ಕನ್ನಡ ರಾಜ್ಯೋತ್ಸವ ಮತ್ತು ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿತ್ತು.

ನಾಡದೇವಿ ಭಾವಚಿತ್ರಕ್ಕೆ  ವೇದಿಕೆ ಮೇಲಿನ ಗಣ್ಯರು ಪುಷ್ಪಾರ್ಚನೆಗೈದು ಗೌರವ ಸಮರ್ಪಿಸಿ ಕಾರ್ಯಕ್ರಮ ಉದ್ಘಾಟಿಸಿದರು,  ಮೈಸೂರು ನಗರ ಸಂಚಾರ ವಿಭಾಗದ ಸಹಾಯಕ ಪೋಲಿಸ್ ಆಯುಕ್ತರಾದ ಗಂಗಾಧರ ಸ್ವಾಮಿಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು, ಇದೇ ಸಂದರ್ಭದಲ್ಲಿ ಸಂವಿಧಾನ ದಿನಾಚರಣೆಯ ಮಹತ್ವ ಮತ್ತು ಸಂಚಾರಿ ನಿಯಮಗಳ ಪಾಲನೆಯ ಕುರಿತು ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ. ರವಿಕುಮಾರ್ ಭಾಗವಹಿಸಿ ಸಮಾರಂಭ ಉದ್ದೇಶಿಸಿ ಮಾತನಾಡಿ ಪ್ರತಿಯೊಬ್ಬ ಕನ್ನಡಿಗರು ಕನ್ನಡ ನಾಡು-ನುಡಿಯ ಬಗ್ಗೆ ಅಭಿಮಾನ ಹೊಂದಿರಬೇಕು, ಕನ್ನಡ ನೆಲ ಜಲ ರಕ್ಷಣೆ ಪ್ರತಿಯೊಬ್ಬ ಕನ್ನಡಿಗರ ಆದ್ಯ ಕರ್ತವ್ಯ ಎಂದು ಹೇಳಿದರು. ಸಮಾರಂಭದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ.ಎಲ್.ಬಸವರಾಜ್ ವಹಿಸಿದ್ದರು.

ಸಮಾರಂಭದಲ್ಲಿ ವಿವಿಧ ವಿಭಾಗಗಳ ಡೀನ್ ಗಳಾದ ಡಾ.ಗೋವಿಂದೇಗೌಡ, ಡಾ. ಭಾಗ್ಯಶ್ರಿ. ಡಾ.ಜಿ.ರತ್ನಾಕರ್ ಸೇರಿದಂತೆ  ಕಾರ್ಯಕ್ರಮ ಸಂಯೋಜಕರಾದ ಚಂದ್ರಶೇಖರ್, ರಾಮಚಂದ್ರ, ಪ್ರಿಯಾಂಕ ಸೇರಿದಂತೆ, ವಿವಿಧ ವಿಭಾಗಗಳ ಮುಖ್ಯಸ್ಥರು, ಸಿಬ್ಬಂದಿಗಳು ಹಾಜರಿದ್ದರು, ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಗೀತಗಾಯನ, ಸಾಂಪ್ರದಾಯಿಕ ನಡಿಗೆ, ಛದ್ಮವೇಷ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: