ಮೈಸೂರು

‘ಪೌರ ಬಂಧು’ ಕೃತಿ ಲೋಕಾರ್ಪಣೆ

ಮೈಸೂರು, ನ.27:- ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಸೆನೆಟ್ ಭವನದಲ್ಲಿಂದು ಎನ್ ರಾಚಯ್ಯ ಅಧ್ಯಯನ ಪೀಠ ಹಾಗೂ ಕರ್ನಾಟಕ ರಾಜ್ಯ ಪೌರಕಾರ್ಮಿಕ ಸಂಘಟನೆಗಳ ಒಕ್ಕೂಟ ವತಿಯಿಂದ  ‘ಪೌರ ಬಂಧು’ ಕೃತಿಯನ್ನು ಲೋಕಾರ್ಪಣೆಗೊಳಿಸಲಾಯಿತು.

ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೃತಿಯನ್ನು ಲೋಕಾರ್ಪಣೆಗೊಳಿಸಿದರು. ಇದೇ ವೇಳೆ ಸಮಕಾಲೀನ ಕರ್ನಾಟಕದಲ್ಲಿ ಪೌರಕಾರ್ಮಿಕರ ಸ್ಥಿತಿಗತಿಗಳು ಕುರಿತು ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್, ಶಾಸಕ ಎಲ್.ನಾಗೇಂದ್ರ, ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: