ಮೈಸೂರು

ವಿವಿಧ ಬೇಡಿಕೆಗಳ ಈಡೇರಿಕೆಗೆ ಎಐಡಿಎಸ್ ಒ ಒತ್ತಾಯ

ಮೈಸೂರು,ನ.27 :-  ಶಿಕ್ಷಣದ ವ್ಯಾಪಾರೀಕರಣ ನಿಲ್ಲಿಸಿ  ಸರಕಾರಿ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಿ,  ಸಂಕಷ್ಟದ ಶೈಕ್ಷಣಿಕ ಸಂದರ್ಭದಲ್ಲಿ ಎನ್.ಇ.ಪಿ ದಿಢೀರ್ ಏರಿಕೆಯನ್ನು ನಿಲ್ಲಿಸಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ   ಆಲ್ ಇಂಡಿಯಾ ಸ್ಟೂಡೆಂಟ್ಸ್ ಆರ್ಗನೈಸೇಷನ್  ವತಿಯಿಂದ ಪ್ರತಿಭಟನೆ ನಡೆಯಿತು.

ಇಂದು ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ  ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು   ಮಾತನಾಡಿ  ಶಿಕ್ಷಣದ ವ್ಯಾಪಾರೀಕರಣ ನಿಲ್ಲಿಸಿ, ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಿ, ಸಂಕಷ್ಟದ ಶೈಕ್ಷಣಿಕ ಸಂದರ್ಭದಲ್ಲಿ ಎನ್ ಇಪಿ -2020 ದಿಢೀರ್ ಹೇರಿಕೆಯನ್ನು ನಿಲ್ಲಿಸಿ. ಎನ್.ಇ.ಪಿ -2020 ರಿಂದ ಉಂಟಾಗಿರುವ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸಿ, ಜಿಲ್ಲಾದ್ಯಂತ ಅರ್ಜಿ ಸಲ್ಲಿಸಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ಪ್ರವೇಶಾತಿಯನ್ನು ಒದಗಿಸಿ, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಆಯಾ ಶೈಕ್ಷಣಿಕ ವರ್ಷದಲ್ಲೇ ವಿದ್ಯಾರ್ಥಿವೇತನವನ್ನು  ಒದಗಿಸಿ, ಮೈಸೂರು ಜಿಲ್ಲೆಯಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ನಿರ್ಮಿಸಿ, ಜಿಲ್ಲೆಯಾದ್ಯಂತ  ಎಲ್ಲಾ ಹಳ್ಳಿಗಳಿಗೂ ಬಸ್ ಸೌಲಭ್ಯವನ್ನು ಒದಗಿಸಿ, ವಿದ್ಯಾರ್ಥಿನಿಯರಿಗೆ ಭದ್ರತೆಯನ್ನು ಖಾತ್ರಿಪಡಿಸಿ, ಅವಶ್ಯಕತೆಗೆ ತಕ್ಕಂತೆ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಸರಕಾರಿ ಶಾಲಾ –ಕಾಲೇಜು, ಹಾಸ್ಟೆಲ್ ಸಂಖ್ಯೆಯನ್ನು  ಹೆಚ್ಚಿಸಿ , ರಾಜ್ಯ ಬಜೆಟ್ ನಲ್ಲಿ ಶೇ. 30% ಒದಗಿಸಿ ಹಾಗೂ ಕೇಂದ್ರ ಬಜೆಟ್ ನಲ್ಲಿ ಶೇ10% ಒದಗಿಸಿ ಎಂಬ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷರಾದ ಅಶ್ವಿನಿ ಕೆ.ಎಸ್, ಜಿಲ್ಲಾ ಕಾರ್ಯದರ್ಶಿ ಬಿ.ರವಿ, ಅಜಯ್ ಕಾಮತ್, ಸುಭಾಷ್ ಬಿ.ಜೆ, ಚಂದ್ರಕಲಾ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಂ)

Leave a Reply

comments

Related Articles

error: