ಮೈಸೂರು

ಬಿಳಿಕೆರೆ ಮಾದೇಶ್ವರ ದೇವಾಲಯದಲ್ಲಿ ವಿಜೃಂಭಣೆಯಿಂದ ಜರುಗಿದ ರಥೋತ್ಸವ

ಮೈಸೂರು,ನ.30:- ಬಿಳಿಕೆರೆ ಮಾದೇಶ್ವರ ದೇವಾಲಯದಲ್ಲಿ ಕಾರ್ತಿಕ ಸೋಮವಾರದ ಪ್ರಯುಕ್ತ ವಿಜೃಂಭಣೆಯಿಂದ  ರಥೋತ್ಸವ ಜರುಗಿತು.

ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ಕ್ಷೇತ್ರಕ್ಕೆ ಸೇರುವ ಹದಿನಾರು ಗ್ರಾಮದ ಬಳಿಯಿರುವ ಬಿಳಿಕೆರೆ ಮಾದೇಶ್ವರ ದೇವಾಲಯದಲ್ಲಿ ಕಡೆ ಕಾರ್ತಿಕ ಸೋಮವಾರದ ಪ್ರಯುಕ್ತ ರಥೋತ್ಸವವು  ಬಾರಿ  ವಿಜೃಂಭಣೆಯಿಂದ ಜರುಗಿತು.  ಈ ಜಾತ್ರಾ ಮಹೋತ್ಸವಕ್ಕೆ ಸುತ್ತಮುತ್ತಲ ಗ್ರಾಮಗಳ ಸಾವಿರಾರು ಭಕ್ತರು ಆಗಮಿಸಿ ದೇವರಿಗೆ ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು.  ಬಂದಂತಹ ಭಕ್ತಾದಿಗಳಿಗೆ ದೇವಸ್ಥಾನದ ಸಮಿತಿ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ನೆರವೇರಿತು. ರಥೋತ್ಸವ ಕಾರ್ಯಕ್ರಮದಲ್ಲಿ ಕ್ಷೇತ್ರ ಶಾಸಕರಾದ ಡಾ. ಯತಿಂದ್ರ ಸಿದ್ದರಾಮಯ್ಯ ಭಾಗವಹಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಇದೇ ವೇಳೆ ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಅಭಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ನಂಜಪ್ಪ, ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಗುರುಮಲ್ಲಪ್ಪ, ಮುಖಂಡರುಗಳಾದ ನಾಗರಾಜು, ಶಿವಕುಮಾರ್ ಸೇರಿದಂತೆ ಗ್ರಾಮ ಪಂಚಾಯತಿ ಎಲ್ಲಾ ಸದಸ್ಯರುಗಳು ಸುತ್ತಮುತ್ತಲಿನ ಗ್ರಾಮದ ಮುಖಂಡರುಗಳು ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: