ಕರ್ನಾಟಕಪ್ರಮುಖ ಸುದ್ದಿ

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಕೈ ಹಿಡಿದು ಕರೆದೊಯ್ದ ಪ್ರಧಾನಿ ಮೋದಿ

ದೇಶ(ನವದೆಹಲಿ),ನ.30 : -2 ದಿನಗಳಿಂದ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇಂದು ಸಂಸತ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ನಿನ್ನೆ ಯಿಂದ ಶುರುವಾಗಿರುವ ಚಳಿಗಾಲದ ಅಧಿವೇಶನ ಡಿಸೆಂಬರ್ 23ರವರೆಗೆ ನಡೆಯಲಿದೆ. ಅಧಿವೇಶನದಲ್ಲಿ ಪಾಲ್ಗೊಳ್ಳಲು ದೆಹಲಿಗೆ ಹೋಗಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಪ್ರಧಾನಿ ಮೋದಿಯವರು ಕೈ ಹಿಡಿದು ಕರೆದುಕೊಂಡು ಹೋಗಿ ಕುರ್ಚಿಯಲ್ಲಿ ಕೂರಿಸಿರುವುದು, ನಗುತ್ತಾ ಮಾತನಾಡುತ್ತಿರುವುದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ.
ಕೊರೊನಾದಿಂದ ಮಾರುಕಟ್ಟೆಯಲ್ಲಿ ಬೆಳೆಗಳಿಗೆ ಸೂಕ್ತ ಬೆಲೆ ಇಲ್ಲದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ತೋಟಗಾರಿಕೆ ಬೆಳೆಗಳು ತೀವ್ರ ಕುಸಿತವಾಗಿ ಸಂಕಷ್ಟದಲ್ಲಿರುವ ರೈತರ ನೆರವಿಗೆ ಧಾವಿಸುವಂತೆ ಪ್ರಧಾನಿ ಮೋದಿ ಅವರನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಒತ್ತಾಯಿಸಿದ್ದರು. ಟೊಮೊಟೊ, ಹೂವು,ತರಕಾರಿ ಹಾಗೂ ಹಣ್ಣು ಸೇರಿದಂತೆ ವಿವಿಧ ತೋಟಗಾರಿಕೆ ಉತ್ಪನ್ನಗಳ ಬೆಲೆ ಕುಸಿತವಾಗಿದೆ ಯೋಗ್ಯ ಬೆಲೆ ಸಿಗದೆ ಕಂಗೆಟ್ಟ ರೈತರು ಹಣ್ಣು ತರಕಾರಿ ಸುರಿದು ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ. ಲಾಕ್ ಡೌನ್ ನಿಂದಾಗಿ ನಗರ ಪ್ರದೇಶಗಳಿಂದ ಜನರು ಗ್ರಾಮೀಣ ಭಾಗಕ್ಕೆ ಮರು ವಲಸೆ ಬಂದಿದ್ದಾರೆ. ಇದರಿಂದ ಗ್ರಾಮೀಣ ಭಾಗದ ಮೇಲೆ ಒತ್ತಡ ಹೆಚ್ಚಾಗಿದೆ. ಅಲ್ಲದೆ, ನಿರುದ್ಯೋಗದ ಪ್ರಮಾಣವೂ ಗಣನೀಯವಾಗಿ ಹೆಚ್ಚಳವಾಗಿದೆ . ಇಂತಹ ಸಂದರ್ಭದಲ್ಲಿ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಮೂಲಕ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಹೆಚ್.ಡಿ.ದೇವೇಗೌಡರು ಮನವಿಮಾಡಿದ್ದರು. (ಎಸ್.ಎಂ,ಎಸ್.ಎಚ್)

Leave a Reply

comments

Related Articles

error: