ಕರ್ನಾಟಕಪ್ರಮುಖ ಸುದ್ದಿ

ರಾಜ್ಯ ಸಹಕಾರ ಪತ್ತಿನ ಸಂಘದ ಸಂಸ್ಥಾಪಕ ಬಿ.ಎಲ್.ಲಕ್ಕೇಗೌಡ ನಿಧನ

ರಾಜ್ಯ(ಬೆಂಗಳೂರು),ನ.30 :- ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘದ ಸಂಸ್ಥಾಪಕರೂ ಆದ ವಕೀಲ ಬಿ.ಎಲ್. ಲಕ್ಕೇಗೌಡ ಅವರು ಇಂದು ನಿಧರಾಗಿದ್ದಾರೆ.
ಭಾರತ್ ಸಮೂಹ ಶಿಕ್ಷಣ ಸಂಸ್ಥೆ, ಭಾರತ್ ಕೋ ಆಪರೇಟಿವ್ ಬ್ಯಾಂಕ್ ಸ್ಥಾಪಿಸಿದ ಲಕ್ಕೇಗೌಡರು, ನಾಡಪ್ರಭು ಕೆಂಪೆಗೌಡ ಕೇಂದ್ರ ಸಮಿತಿ ಅಧ್ಯಕ್ಷರಾಗಿ ಬೆಂಗಳೂರಿನಲ್ಲಿ ದಶಕಗಳಿಂದ ಅನೇಕ ಕನ್ನಡಪರ ಹೋರಾಟಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.
ಬಿ.ಎಲ್. ಲಕ್ಕೇಗೌಡರ ನಿಧನಕ್ಕೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ, ಮಾಜಿ ಸಿಎಂ ಎಚ್.ಡಿ.ಕುಮಾರ್ ಸ್ವಾಮಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಲಕ್ಕೇಗೌಡರ ನಿಧನದ ಸುದ್ದಿ ಆಘಾತ ಉಂಟುಮಾಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ . ಅವರ ಕುಟುಂಬದವರಿಗೆ , ಬಂಧು ಬಳಗ ಹಾಗೂ ಅವರ ಅಭಿಮಾನಿಗಳಿಗೆ ದೇವರು ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಎಚ್.ಡಿ ದೇವೇಗೌಡರು ಟ್ವೀಟ್ ಮಾಡಿದ್ದಾರೆ. (ಎಸ್.ಎಮ್,ಎಸ್.ಎಚ್)

Leave a Reply

comments

Related Articles

error: